Home ತಾಜಾ ಸುದ್ದಿ ಅತ್ಯಾಚಾರ ಪ್ರಕರಣ: ನಾಪತ್ತೆಯಾಗಿದ್ದ ನಟ ಮಡೆನೂರು ಮನು ಅರೆಸ್ಟ್‌..!

ಅತ್ಯಾಚಾರ ಪ್ರಕರಣ: ನಾಪತ್ತೆಯಾಗಿದ್ದ ನಟ ಮಡೆನೂರು ಮನು ಅರೆಸ್ಟ್‌..!

0

ಬೆಂಗಳೂರು: ಅತ್ಯಾಚಾರ ಪ್ರಕರಣದ ದಾಖಲಾದ ಬಳಿಕ ನಾಪತ್ತೆಯಾಗಿದ್ದ ನಟ ಮಡೆನೂರು ಮನುವನ್ನು ಪೊಲೀಸರು ಬಂಧಿಸಿದ್ದಾರೆ.

ಅತ್ಯಾಚಾರ ಪ್ರಕರಣ ದಾಖಲಾದ ಬಳಿಕ ಹಾಸನದ ಶಾಂತಿಗ್ರಾಮದ ಮಡೆನೂರಿನಲ್ಲಿ ತಲೆಮರೆಸಿಕೊಂಡಿದ್ದ ಮನುವನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.

ಸಂಭಾವನೆ ನೀಡುವ ನೆಪದಲ್ಲಿ ಬಂದು ನನ್ನ ಮೇಲೆ ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನು ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ಸಹ ಕಲಾವಿದೆ ದೂರು ನೀಡಿದ್ದರು.

ಮಡೆನೂರು ಮನು ಕುಲದಲ್ಲಿ ಕೀಳ್ಯಾವುದೊ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸಿದ್ದರು. ನಾಳೆ ಚಿತ್ರ ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಈ ಹೊತ್ತಲ್ಲೇ ನಟನ ಮೇಲೆ ಎಫ್‌ಐಆರ್‌ ದಾಖಲಾಗಿತ್ತು.

LEAVE A REPLY

Please enter your comment!
Please enter your name here