ಉತ್ತರಖಂಡ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಭಗವದ್ಗೀತೆ ಪಠಣ, ಪ್ರತಿದಿನ ಒಂದೊಂದು ಶ್ಲೋಕ

Prakhara News
0 Min Read

ಉತ್ತರಾಖಂಡದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ , ಬೆಳಗ್ಗೆ ವಿದ್ಯಾರ್ಥಿಗಳಿಗೆ ಶ್ರೀಮದ್ ಭಗವದ್ಗೀತೆಯ ಶ್ಲೋಕಗಳನ್ನು ಕಲಿಸಲಾಗುತ್ತದೆ .

ಉತ್ತರಾಖಂಡ ಸರ್ಕಾರದ ಅಧಿಕೃತ ಆದೇಶದ ಪ್ರಕಾರ, ರಾಜ್ಯದ ಸರ್ಕಾರಿ ಶಾಲೆಗಳ ಪ್ರಾರ್ಥನಾ ಸಭೆಯಲ್ಲಿ ಪ್ರತಿದಿನ ವಿದ್ಯಾರ್ಥಿಗಳಿಗೆ ಭಗವದ್ಗೀತೆಯ ಒಂದು ಶ್ಲೋಕವನ್ನು ಅರ್ಥಪೂರ್ಣವಾಗಿ ಪಠಿಸಬೇಕು. ಆಧುನಿಕ ಶಿಕ್ಷಣದ ಜೊತೆಗೆ ಭಾರತೀಯ ಸಂಪ್ರದಾಯದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಮೂಲಕ ಅವರನ್ನು ಉತ್ತಮ ನಾಗರಿಕರನ್ನಾಗಿ ಮಾಡುವುದು ಇದರ ಉದ್ದೇಶವಾಗಿದೆ. ಈ ಆದೇಶವು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯಾದ್ಯಂತ ಸುಮಾರು 17,000 ಸರ್ಕಾರಿ ಶಾಲೆಗಳಲ್ಲಿ ಜಾರಿಗೆ ಬಂದಿದೆ .

Share This Article
Leave a Comment