ಮಂಗಳೂರು: ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ಉಡುಪಿಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಇಬ್ಬರು ಯುವಕರನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ.


ಆರೋಪಿಗಳನ್ನು ಉಡುಪಿ ಜಿಲ್ಲೆಯ ಬಡಗುಬೆಟ್ಟು ನಿವಾಸಿ ಬಸ್ಸು ನಿರ್ವಾಹಕ ದೀಪಕ್ (19) ಮತ್ತು ಆತನ ಸ್ನೇಹಿತ ಅತ್ರಾಡಿ ಪರ್ಕಳ ಭಟ್ರಪಲ್ಕೆ ನಿವಾಸಿ ನವೀನ್ ಶೆಟ್ಟಿ (21) ಎಂದು ಗುರುತಿಸಲಾಗಿದೆ.
ಆರೋಪಿಗಳಿಗೆ ಬಾಲಕಿ ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾಗಿದ್ದು, ಅದರಂತೆ ಆರೋಪಿಗಳು ಜು.19 ರಂದು ಮೂಲ್ಕಿ ಸಮೀಪದ ಬಪ್ಪನಾಡುನಿಂದ ಸ್ಕೂಟರ್ ನಲ್ಲಿ ಬಾಲಕಿಯನ್ನು ಅಪಹರಿಸಿಕೊಂಡು ಉಡುಪಿಗೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
