ವಿಟ್ಲ: ಮಿನಿ ಟಿಪ್ಪರ್ ಮತ್ತು ಆಲ್ಟೊ ಕಾರು ನಡುವೆ ಭೀಕರ ಅಪಘಾತ- ನವವಿವಾಹಿತ ಸಾವು

Prakhara News
1 Min Read

ವಿಟ್ಲ : ಮಿನಿ ಟಿಪ್ಪರ್ ಮತ್ತು ಆಲ್ಟೊ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಚಾಲಕ ಅನೀಶ್ ಹಾಗೂ ಸಹೋದರಿ ಮಹಿಳೆ ಸಹಿತ ಮಗು ಗಂಭೀರ ಗಾಯಗೊಂಡ ಘಟನೆ ವೀರಕಂಬ ಗ್ರಾಮದ ಕೆಲಿಂಜದಲ್ಲಿ ನಡೆದಿದೆ.ಕಲ್ಲಡ್ಕದಿಂದ ವಿಟ್ಲ ಕಡೆ ಬರುತ್ತಿದ್ದ ಆಲ್ಟೊ ಕಾರಿಗೆ ವಿಟ್ಲದಿಂದ ಕಲ್ಲಡ್ಕ ಕಡೆ ಚಲಿಸುತ್ತಿದ್ದ ಮಿನಿ ಟಿಪ್ಪರ್ ನಡುವೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಕಾರಿನಲ್ಲಿದ್ದ ಚಾಲಕ ಹಾಗೂ ಸಹೋದರಿ ಮಹಿಳೆ ಹಾಗೂ ಮಗು ಗಂಭೀರ ಗಾಯ ಗೊಂಡಿ ದ್ದಾರೆ.

ಗಾಯಳು ಗಳನ್ನು ಅನಂತಾಡಿ ಆಶ್ವತ್ತಡಿ ಮೂಲದದವರೆಂದು ಗುರುತಿಸಲಾಗಿದೆ. ಚಿಕೆತ್ಸೆ ಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ರವಾನಿಸಲಾಗಿತ್ತು. ನಿನ್ನೆ ತಡರಾತ್ರಿ ಚಾಲಕ ಅನೀಶ್ ಅನಂತಾಡಿ (34) ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ.ಎರಡು ತಿಂಗಳ ಹಿಂದೆ ಮದುವೆಯಾದ ಅನೀಶ್ ಅನಂತಾಡಿ ಚಿಕಿತ್ಸೆ ಫಲಕಾರಿಯಾಗದೆ ವಿಧಿಯ ಕ್ರೂರ ಲೀಲೆಗೆ ಬಲಿಯಾಗಿದ್ದಾರೆ.

Share This Article
Leave a Comment