ಧರ್ಮಸ್ಥಳದಲ್ಲಿ ನಿಗೂಢ ಸಾವು ಪ್ರಕರಣ : ನೇತ್ರಾವತಿ ಸ್ನಾನಘಟ್ಟ ಬಳಿ ಶವಗಳ ಉತ್ಖನನ 

Prakhara News
1 Min Read

ಧರ್ಮಸ್ಥಳದಲ್ಲಿ ಅಪರಿಚಿತ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದೆ. ನೂರಾರು ಶವಗಳನ್ನು ಹೂತಿದ್ದೇನೆ ಎಂದಿದ್ದ ದೂರುದಾರ ಇದೀಗ 13 ಸ್ಥಳಗಳನ್ನ ಗುರುತಿಸಿದ್ದು, ಇಂದಿನಿಂದ ಶವಗಳನ್ನು ಹೊರತೆಯುವ ಕಾರ್ಯ ಶುರು ಮಾಡಲಾಗುತ್ತಿದೆ.

ನಿನ್ನೆ ಧರ್ಮಸ್ಥಳ ಗ್ರಾಮದ ಬೇರೆ ಬೇರೆ ಕಡೆಗಳಲ್ಲಿ ಶವ ಹೂತಿಟ್ಟ 13 ಜಾಗಗಳನ್ನ ಗುರುತು ಮಾಡಲಾಗಿತ್ತು. ಎಸ್‌ಐಟಿ ಅಧಿಕಾರಿಗಳು ಬಿಗಿ ಭದ್ರತೆಯಲ್ಲಿ ಆತನನ್ನು ಧರ್ಮಸ್ಥಳದ ನೇತ್ರಾವತಿ ಸ್ಥಾನಘಟ್ಟದ ಬಳಿ ಕರೆ ತಂದು, ಸ್ನಾನಘಟ್ಟದ ಎಡ ಬದಿಯಲ್ಲಿ ಎರಡು ಗಂಟೆಗಳ ಕಾಲ ಒಂದು ಕಿಲೋಮೀಟರ್ ಸಾಗಿ ಒಟ್ಟು 8 ಸ್ಥಳಗಳನ್ನ ಗುರುತಿಸಲಾಗಿತ್ತು. ಬಳಿಕ ನೇತ್ರಾವತಿ ಸ್ನಾನಘಟ್ಟ ಹಾಗೂ ನೇತ್ರಾವತಿ ಸೇತುವೆಯ ಮಧ್ಯಭಾಗದ ಅರಣ್ಯ ಪ್ರದೇಶದಲ್ಲಿ ನಾಲ್ಕು ಜಾಗಗಳನ್ನ ಗುರುತಿಸಲಾಗಿದೆ.

ಮೊದಲು ಗುರುತು ಮಾಡಿದ್ದ ಸ್ಥಳದಿಂದಲೇ ಸಮಾಧಿ ಅಗೆಯುವ ಕೆಲಸಕ್ಕೆ ಎಸ್‌ಐಟಿ ಮುಂದಾಗಿದೆ. ಅದಕ್ಕಾಗಿ 12 ಕಾರ್ಮಿಕರನ್ನು ನಿಯೋಜನೆ ಮಾಡಿಕೊಂಡಿದೆ ವಿಶೇಷ ತನಿಖಾ ತಂಡ. ಗ್ರಾಮ ಪಂಚಾಯಿತಿಯಿಂದ 12 ಕಾರ್ಮಿಕರನ್ನ ನಿಯೋಜನೆ ಮಾಡಿಕೊಳ್ಳಲಾಗಿದೆ. ಅಲ್ಲದೇ ಧರ್ಮಸ್ಥಳ ಗ್ರಾಪಂ ನಿಂದ ಉತ್ಖನನಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಲಾಗಿದೆ. ಸ್ಟೆಲ್ಲಾ ವರ್ಗೀಸ್, ಕಂದಾಯ ಇಲಾಖೆ ಇತರ ಸಿಬ್ಬಂದಿಗಳೂ ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ. ಇಂದಿನಿಂದ ಸಮಾಧಿ ಅಗೆಯುವ ಕಾರ್ಯ ಶುರುವಾಗಿದೆ.

Share This Article
Leave a Comment