Home ಪ್ರಖರ ವಿಶೇಷ ಸರ್ಕಾರಿ ಬಸ್​​ನಲ್ಲಿ ಮಹಿಳೆಯರಿಗೆ ಫ್ರೀ; ಧರ್ಮಸ್ಥಳ, ಕುಕ್ಕೆ ಕ್ಷೇತ್ರದಲ್ಲಿ ಜನವೋ ಜನ

ಸರ್ಕಾರಿ ಬಸ್​​ನಲ್ಲಿ ಮಹಿಳೆಯರಿಗೆ ಫ್ರೀ; ಧರ್ಮಸ್ಥಳ, ಕುಕ್ಕೆ ಕ್ಷೇತ್ರದಲ್ಲಿ ಜನವೋ ಜನ

0

ಮಂಗಳೂರು: ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಉಚಿತ ಪ್ರಯಾಣದ ‘ಶಕ್ತಿ’ ಯೋಜನೆಗೆ ಕಳೆದ ಎರಡು ದಿನಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಹೇಳಲಾಗುತ್ತಿದೆ. ಯೋಜನೆಗೆ ಚಾಲನೆ (ಜೂ.11) ಸಿಕ್ಕಿದ ದಿನವೇ 5,71,023 ಮಹಿಳೆಯರು ಉಚಿತ ಪ್ರಯಾಣದ ಲಾಭ ಪಡೆದುಕೊಂಡಿದ್ದರು.

ಇದೀಗ ಸರ್ಕಾರಿ ಬಸ್ಸಿನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಇರುವ ಹಿನ್ನೆಲೆಯಲ್ಲಿ ಕರಾವಳಿ ಭಾಗದ ಪ್ರಸಿದ್ಧ ತೀರ್ಥ ಕ್ಷೇತ್ರಗಳಲ್ಲಿ ಭಕ್ತರ ದಟ್ಟಣೆ ಹೆಚ್ಚಿದೆ. ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ಅಧಿಕ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ, ದೇವರ ದರ್ಶನ ಪಡೆಯುತ್ತಿದ್ದಾರೆ.

LEAVE A REPLY

Please enter your comment!
Please enter your name here