ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಕೇಸ್ ನಿಂದ ಹಿಂದೆ ಸರಿದ ನ್ಯಾಯಾಧೀಶರು!

Prakhara News
1 Min Read

ಬೆಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿರುವ ಆರೋಪಕ್ಕೆ ಸಂಬಂಧಿಸಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ, ಡಿ.ಹರ್ಷೇಂದ್ರ ಕುಮಾರ್ ವಿರುದ್ಧ ಯಾವುದೇ ಮಾನಹಾನಿ ವಿಷಯ ಪ್ರಸಾರ ಅಥವಾ ಪ್ರಕಟ ಮಾಡದಂತೆ ನಿರ್ದೇಶಿಸಲು ಅಸಲು ದಾವೆಯ ವಿಚಾರಣೆ ಬೇರೊಂದು ನ್ಯಾಯಾಲಯಕ್ಕೆ ವರ್ಗಾಯಿಸಲು ಬೆಂಗಳೂರು ನಗರ ಜಿಲ್ಲಾ ಮತ್ತು ಪ್ರಧಾನ ಸೆಷನ್ಸ್ ನ್ಯಾಯಾಧೀಶರಿಗೆ 10ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶ ವಿಜಯಕುಮಾರ್‌ರೈ ಕೋರಿದ್ದಾರೆ.

ಪ್ರಕರಣ ಸಂಬಂಧ ತಮ್ಮ ಹಾಗೂ ತಮ್ಮ ಕುಟುಂಬ ಸದಸ್ಯರ ವಿರುದ್ಧ ಯಾವುದೇ ಮಾನಹಾನಿ ವಿಷಯ ಪ್ರಸಾರ ಅಥವಾ ಪ್ರಕಟ ಮಾಡದಂತೆ ಮಾಧ್ಯಮಗಳಿಗೆ ನಿರ್ದೇಶಿಸುವಂತೆ ಕೋರಿ ಕೋರಿ ಡಿ.ಹರ್ಷೇಂದ್ರ ಕುಮಾರ್ ಅವರು ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋಟ್ ಕೋರಿದ್ದರ್ ಗೆ ಅಸಲು ದಾವೆ ಸಲ್ಲಿಸಿದ್ದರು. ಅದನ್ನು 2025ರ ಜು.18ರಂದು ವಿಚಾರಣೆ ನಡೆಸಿದ್ದ ನ್ಯಾಯಾಧೀಶ ವಿಜಯ್‌ಕುಮಾರ್ ರೈ, ಮಾಧ್ಯಮಗಳ ವಿರುದ್ಧ ಏಕ ಪಕ್ಷೀಯ ನಿರ್ಬಂಧಕಾಜ್ಞೆ ಹೊರಡಿಸಿತ್ತು.ಇದರಿಂದ ಪತ್ರಕರ್ತ ನವೀನ್ ಸೂರಿಂಜೆ, ಸಾಮಾಜಿಕ ಹೋರಾಟಗಾರ ಮುನೀರ್‌ಕಾಟಿಪಳ್ಳ ಹಾಗೂ ಬೈರಪ್ಪ ಹರೀಶ್

ಕುಮಾರ್‌ಮಧ್ಯಂತರ ಮೆಮೊ ಸಲ್ಲಿಸಿದ್ದರು. ನ್ಯಾಯಾ ಧೀಶ ರೈ ಅವರು, ಹರ್ಷೇಂದ್ರ ಕುಮಾರ್ ಕುಟುಂಬ ನಿರ್ವಹಣೆ ಮಾಡುತ್ತಿರುವ ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಾಥ ಕಾನೂನು ಕಾಲೇಜಿನಲ್ಲಿ 25 ವರ್ಷಗಳ ಹಿಂದೆ ವಿದ್ಯಾರ್ಥಿಯಾಗಿದ್ದರು. ಹೀ ಗಾಗಿ, ಹಾಲಿ ಪ್ರಕರಣ ಬೇರೊಂದು ನ್ಯಾಯಾ ವರ್ಗಾಯಿಸಬೇಕು ಎಂದು ಕೋರಿದ್ದರು. ನ್ಯಾಯಾಲಯಕ್ಕೆ ಪರಿಗಣಿಸಿದ ನ್ಯಾಯಾಧೀಶ ರೈ ಅವರು, ಹರ್ಷೇಂದ್ರ ಕುಮಾರ್ ಅಸಲು ದಾವೆ ವಿಚಾರಣೆ ಬೇರೊಂದು ಕೋರ್ಟ್‌ಗೆ ವರ್ಗಾಯಿಸುವುದು ಸೂಕ್ತ ಎಂದು ಪ್ರಧಾನ ನ್ಯಾಯಾಧೀಶರಿಗೆ ಕೋರಿದ್ದಾರೆ.

Share This Article
Leave a Comment