ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಅರೆಸ್ಟ್

Prakhara News
0 Min Read

ಬಂಟ್ವಾಳ: ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ದಿನಾಂಕ 10.8.2025 ರಂದು ಬಂಟ್ವಾಳ ತಾಲೂಕು ಪುದು ಗ್ರಾಮದ ನಿವಾಸಿ  ರಂಜಿತ್ @ ರಂಜು  (35) ಎಂಬಾತನನ್ನು ಬಂಧಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.

ದಿನಾಂಕ 27.05.2025 ರಂದು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ 12 ಜನ ಆರೋಪಿಗಳನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿದಿದೆ.

Share This Article
Leave a Comment