ಉಳ್ಳಾಲ: ಕರ್ತವ್ಯದಲ್ಲಿದ್ದಾಗಲೇ ಕುಸಿದು ಬಿದ್ದು ಬಸ್ ನಿರ್ವಾಹಕ ಸಾವು

Prakhara News
0 Min Read

ಉಳ್ಳಾಲ: ಕಾಲೇಜು ಬಸ್ಸಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಿರ್ವಾಹಕ ಕರ್ತವ್ಯದಲ್ಲಿದ್ದಾಗಲೇ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಅಡ್ಯಾರ್ ಸಮೀಪ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಕುತ್ತಾರು ನಿವಾಸಿ ಸಂತೋಷ್ (40) ಎಂದು ಗುರುತಿಸಲಾಗಿದೆ.

ನಿಟ್ಟೆ ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯಕ್ಕೆ ಸೇರಿದ ಬಸ್ಸಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ಬೆಳಗ್ಗಿನ ವೇಳೆ ಶಾಲಾ ವಿದ್ಯಾರ್ಥಿಗಳನ್ನು ಶಾಲೆಗೆ ಕರೆತರಲು ತೆರಳುವ ಟ್ರಿಪ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಘಟನೆ ನಡೆದಿದೆ.

ಬಸ್ಸೊಳಗಡೆ ಶಾಲಾ ವಿದ್ಯಾರ್ಥಿಗಳನ್ನು ಹತ್ತಿಸುವ ಸಂದರ್ಭದಲ್ಲಿ ಏಕಾಏಕಿ ಕುಸಿದುಬಿದ್ದಿದ್ದಾರೆ. ತಕ್ಷಣ ಸ್ಥಳೀಯರು ಸೇರಿಕೊಂಡು ಆಸ್ಪತ್ರೆ ಸೇರಿಸುವ ಪ್ರಯತ್ನ ಮಾಡಿದರಾದರೂ, ದಾರಿಮಧ್ಯೆ ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆಂದು ಮೇಲ್ನೋಟಕ್ಕೆ ತಿಳಿದುಬಂದಿದೆ.

Share This Article
Leave a Comment