ಬೆಂಗಳೂರು: ಇಂದು ಸಂಜೆಯೊಳಗೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸುವಂತೆ ಗೃಹ ಸಚಿವ ಜಿ. ಪರಮೇಶ್ವರ್ ಪೊಲೀಸರಿಗೆ ಸೂಚನೆ ನೀಡಿದ್ದಾರೆ.


ಮಹೇಶ್ ಶೆಟ್ಟಿ ತಿಮರೋಡಿ ಅವರು ಸಿಎಂ ಸಿದ್ದರಾಮಯ್ಯ 24 ಕೊಲೆಗಳನ್ನು ಮಾಡಿದ್ದಾರೆ ಎಂದು ಹೇಳಿಕೆಯನ್ನು ನೀಡಿದ್ದು, ಇದೀಗ ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ತಿಮರೋಡಿಯನ್ನು ಬಂಧಿಸುವಂತೆ ಸೂಚನೆ ನೀಡಿದೆ.
ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಮರೋಡಿಯವರ ವಿರುದ್ಧ ಒಂದೇ ದಿನದಲ್ಲಿ ಕಠಿಣ ಕ್ರಮವನ್ನು ಕೈಗೊಳ್ಳಲು ಮುಂದಾಗಿದ್ದು, ಕೂಡಲೇ ಮಹೇಶ್ ಶೆಟ್ಟಿ ತಿಮ್ಮರೋಡಿಯ ಮೇಲೆ ಎಫ್‌ಐಆರ್ ದಾಖಲಿಸುವಂತೆ ಸದನದಲ್ಲಿಯೇ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಹೀಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸುವ ಸಾಧ್ಯತೆಯಿದ್ದು, ಬಿಎನ್‌ಎಸ್ ಕಾಯ್ದೆಯಡಿ ಅವಹೇಳನೆ ಮಾಡಿದ ಆರೋಪದಲ್ಲಿ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದೆ.
