ಧರ್ಮಸ್ಥಳ ಕೇಸ್: ವೀರೇಂದ್ರ ಹೆಗಡೆ ಫಸ್ಟ್ ರಿಯಾಕ್ಷನ್ ..!

Prakhara News
1 Min Read

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಡಾ.ವೀರೇಂದ್ರ ಹೆಗಡೆ ಅವರು ಮೊದಲ ಪ್ರತಿಕ್ರಿಯೆಯನ್ನು ನೀಡಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವಂತ ಅವರು, ಧರ್ಮಸ್ಥಳದ ಬಗ್ಗೆ ಅನಗತ್ಯವಾಗಿ ಗೊಂದಲ ಮೂಡಿಸಲಾಗುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ತರಾವರಿಯಾಗಿ ಸುದ್ದಿ ಪ್ರಕಟಿಸಲಾಗುತ್ತಿದೆ ಎಂದರು.

ಎಸ್ಐಟಿ ಬಗ್ಗೆ ನನಗೆ ನಂಬಿಕೆಯಿದೆ. ಉತ್ತಮ ರೀತಿಯಲ್ಲಿ ಕೆಲಸ ಮಾಡಿ, ಸತ್ಯವನ್ನು ಹೊರ ತರಲಿದೆ. ಸಿಬಿಐ ತನಿಖೆಗೆ ನಾವು ಸಂಪೂರ್ಣ ಸಹಕಾರ ನೀಡುತ್ತೇವೆ. ಸೋಷಿಯಲ್ ಮೀಡಿಯಾದಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ ಎಂದರು.

ಅಂದಹಾಗೇ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ನಡೆಸಲಾಗುತ್ತಿದೆ. ಮಾಸ್ಕ್ ಮ್ಯಾನ್ ತೋರಿಸಿದಂತ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು. ಉತ್ಖನನಗ ವೇಳೆಯಲ್ಲಿ ಎರಡು ಸ್ಥಳಗಳಲ್ಲಿ ಮಾತ್ರವೇ ಅಸ್ಥಿ ಪಂಜರಗಳು ದೊರೆತಿವೆ. ಸದ್ಯ ತಾತ್ಕಾಲಿಕವಾಗಿ ಶೋಧ ಕಾರ್ಯಾಚರಣೆಗೆ ಬ್ರೇಕ್ ಹಾಕಲಾಗಿದೆ. ಎಸ್ಐಟಿಯು ಮಾಸ್ಕ್ ಮ್ಯಾನ್ ಅನ್ನು ಈ ವಿಚಾರವಾಗಿ ವಿಚಾರಣೆ ನಡೆಸುತ್ತಿದೆ.

Share This Article
Leave a Comment