ಮೂಡುಬಿದಿರೆ: ದೂರು ನೀಡಲು ಬಂದಿದ್ದ ಮಹಿಳೆಯೊಂದಿಗೆ ಅಶ್ಲೀಲ ವರ್ತನೆ- ಪೊಲೀಸ್ ಅಮಾನತು

Prakhara News
1 Min Read

ಮೂಡುಬಿದಿರೆ: ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದ ಮಹಿಳೆಗೆ ಪೊಲೀಸ್ ಸಿಬ್ಬಂದಿಯೋರ್ವ ಕರೆ ಮಾಡಿ ಅಶ್ಲೀಲ‌ ಮಾತನಾಡಿ ಕಿರುಕುಳ ನೀಡಿರುವ ಘಟನೆ ನಡೆದಿದೆ.

ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ತೋಡಾರು ಬಳಿಯ ವಿವಾಹಿತ ಮಹಿಳೆಯೊಬ್ಬರು ಕುಟುಂಬ ಸಮಸ್ಯೆಯ ಬಗ್ಗೆ ಆ.23ರಂದು‌ ಮೂಡುಬಿದಿರೆ ಪೊಲೀಸ್‌ ಠಾಣೆಗೆ ತೆರಳಿ ದೂರು ನೀಡಿದ್ದರು ಎಂದು‌ ತಿಳಿದು ಬಂದಿದೆ.

ಈ ಬಗ್ಗೆ ಪೊಲೀಸ್ ನಿರೀಕ್ಷಕ ಸಂದೇಶ್ ಅವರು ಪತಿ ಹಾಗೂ ಪತ್ನಿಯನ್ನು ಠಾಣೆಗೆ ಕರೆಸಿ ಮಾತನಾಡಿ ಪ್ರಕರಣವನ್ನು ಇತ್ಯರ್ಥಗೊಳಿಸಿ ಕಳುಹಿಸಿದ್ದರು ಎಂದು ತಿಳಿದು ಬಂದಿದೆ.

ಈ ನಡುವೆ ಮೂಡುಬಿದಿರೆ ಪೊಲೀಸ್ ಠಾಣೆಯ ಸಿಬ್ಬಂದಿ ಶಾಂತಪ್ಪ ಎಂಬಾತ ಸಂತ್ರಸ್ತ ಮಹಿಳೆ ನೀಡಿದ್ದ ದೂರು ಪ್ರತಿಯಲ್ಲಿದ್ದ ಆಕೆಯ ಮೊಬೈಲ್ ಸಂಖ್ಯೆಯನ್ನು ಪಡೆದು ಆ.25ರಿಂದ ಸೆ.1ರ ವರೆಗೂ ಆಕೆಗೆ ನಿರಂತರ ಮೆಸೇಜ್ ಮತ್ತು ಕರೆ ಮಾಡಿ ಅಶ್ಲೀಲವಾಗಿ‌ ಮಾತನಾಡುತ್ತಾ, ತನ್ನೊಂದಿಗೆ ಬರುವಂತೆ ಕರೆಯುತ್ತಿದ್ದ ಎಂದು ಮಹಿಳೆ ಸೆ.1ರಂದು ಮೂಡುಬಿದಿರೆ ಠಾಣೆಗೆ ಬಂದು ಸಿಬ್ಬಂದಿ ಶಾಂತಪ್ಪನ ವಿರುದ್ಧ ಕಾಲ್ ರೆಕಾರ್ಡ್ ಸಹಿತ ದೂರು ನೀಡಿದ್ದರು ಎಂದು ತಿಳಿದು ಬಂದಿದೆ.

ಈ ಕುರಿತು ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ಶಾಂತಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ ತಿಳಿದು ಬಂದಿದೆ. ಆರೋಪಿ ಶಾಂತಪ್ಪನನ್ನು ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ.

Share This Article
Leave a Comment