ರಾಜ್ಯಾದ್ಯಂತ 8 ಲಕ್ಷ BPL ರೇಷನ್ ಕಾರ್ಡ್ ರದ್ದು.!

Prakhara News
1 Min Read

ರಾಜ್ಯಾದ್ಯಂತ ಬರೋಬ್ಬರಿ 12,68,097 ಅನುಮಾನಾಸ್ಪದ ರೇಷನ್ ಕಾರ್ಡ್‌ಗಳನ್ನು ಪತ್ತೆ ಮಾಡಲಾಗಿದೆ. ಈ ಪೈಕಿ 8 ಲಕ್ಷ ರೇಷನ್ ಕಾರ್ಡ್‌ಗಳನ್ನು ರದ್ದುಗೊಳಿಸಲು ಆಹಾರ ಇಲಾಖೆ ಮುಂದಾಗಿದೆ.

ಆಹಾರ ಇಲಾಖೆಯ ವಿಶೇಷ ಕಾರ್ಯಾಚರಣೆ ವೇಳೆ ರಾಜ್ಯದಲ್ಲಿ ಬರೋಬ್ಬರಿ 8 ಲಕ್ಷ ಮಂದಿ ಅನರ್ಹರು ಬಿಪಿಎಲ್ ಕಾರ್ಡ್ ಪಡೆದಿದ್ದಾರೆ ಎನ್ನುವ ಮಾಹಿತಿಯನ್ನು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯೇ ನೀಡಿದೆ. ಹೀಗಾಗಿ ಅನರ್ಹರು ಪಡೆದಿರುವ ಬಿಪಿಎಲ್ ಕಾರ್ಡ್‌ ಗಳನ್ನು ರದ್ದುಪಡಿಸಲು ಇಲಾಖೆ ಅಗತ್ಯ ಕ್ರಮ ಕೈಗೊಂಡಿದೆ.

ಬೆಂಗಳೂರು ನಗರದಲ್ಲೇ 1 ಲಕ್ಷಕ್ಕೂ ಅಧಿಕ ಮಂದಿ ಬಿಪಿಎಲ್ ಕಾರ್ಡ್ ಹೊಂದಿರುವುದು ಪತ್ತೆಯಾಗಿದೆ. ಇಲಾಖೆ ನಡೆಸಿದ ವಿಶೇಷ ಕಾರ್ಯಾಚರಣೆ ವೇಳೆ 12,68,097 ಅನುಮಾನಾಸ್ಪದ ರೇಷನ್ ಕಾರ್ಡ್‌ಗಳನ್ನು ಪತ್ತೆ ಮಾಡಲಾಗಿದೆ. ಈ ಪೈಕಿ 8 ಲಕ್ಷ ರೇಷನ್ ಕಾರ್ಡ್‌ಗಳನ್ನು ರದ್ದುಗೊಳಿಸಲು ತೀರ್ಮಾನಿಸಲಾಗಿದ್ದು ಈ ಬಗ್ಗೆ ಶೀಘ್ರವೇ ಆಹಾರ ಇಲಾಖೆ ಸರ್ಕಾರಕ್ಕೆ ಈ ಬಗ್ಗೆ ಅಧಿಕೃತ ವರದಿ ಸಲ್ಲಿಸಲಿದೆ.

ಮೃತಪಟ್ಟವರ ಹೆಸರು ಮತ್ತು ನಕಲಿ ಬಿಪಿಎಲ್ ಕಾರ್ಡ್‌ಗಳನ್ನು ಬಳಸಿ ಪ್ರತಿ ತಿಂಗಳು ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತವಾಗಿ ಪಡಿತರ ಪಡೆಯುತ್ತಿರುವ ಅಘಾತಕಾರಿ ಸಂಗತಿಯೂ ಬೆಳಕಿಗೆ ಬಂದಿದೆ. ರಾಜ್ಯದಲ್ಲಿ ನಿಗದಿಗಿಂತ ಹೆಚ್ಚುವರಿಯಾಗಿ 14 ಲಕ್ಷ ರೇಷನ್‌ ಕಾರ್ಡ್‌ಳು ಇಲಾಖೆಯಿಂದಲೇ ವಿತರಿಸಲಾಗಿದೆ ಎನ್ನಲಾಗಿದೆ.

Share This Article
Leave a Comment