ರಾಜ್ಯದ ಜನತೆಗೆ ಬಿಗ್ ಶಾಕ್ : ಅನರ್ಹ ಬಿಪಿಎಲ್ ಪಡಿತರ ಚೀಟಿ ರದ್ದತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Prakhara News
1 Min Read

ಬೆಂಗಳೂರು : ರಾಜ್ಯದ ಜನತೆಗೆ ಇದೀಗ ಬಿಗ್ ಶಾಕ್ ಎದುರಾಗಿದ್ದು, ಯಾರೆಲ್ಲ ಪಡಿತರ ಚೀಟಿ ಹೊಂದಲು ಅನರ್ಹರೋ ಅಂತವರ ಬಿಪಿಎಲ್ ಕಾರ್ಡ್ ಅನರ್ಹಗೊಳಿಸಲು ಸಿಎಂ ಸಿದ್ದರಾಮಯ್ಯ ಇದೀಗ ಸೂಚನೆ ನೀಡಿದ್ದಾರೆ.

ಸಭೆಯಲ್ಲಿ ಅರ್ಹ ಬಿಪಿಎಲ್ ಕಾರ್ಡ್‌ದಾರರಿಗೆ ಯಾವುದೇ ತೊಂದರೆ ಆಗಬಾರದು, ಬದಲಿಗೆ ಅವರಿಗೆ ಸುಲಭವಾಗಿ ಸೌಲಭ್ಯ ದೊರೆಯುವಂತೆ ನೋಡಿಕೊಳ್ಳಬೇಕು. ಆದರೆ ಅನರ್ಹ ಕಾರ್ಡ್‌ಗಳನ್ನು ಯಾವುದೇ ಮುಲಾಜಿಲ್ಲದೆ ತಕ್ಷಣವೇ ರದ್ದುಪಡಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

ಅಧಿಕಾರಿಗಳ ವಿವರ ಪ್ರಕಾರ, ರಾಜ್ಯದಲ್ಲಿ ಈಗಾಗಲೇ ಗುರುತಿಸಲ್ಪಟ್ಟ 3,65,614 ಅನರ್ಹ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದ್ದು ಅಥವಾ ವರ್ಗ ಬದಲಾವಣೆ ಮಾಡಲಾಗಿದೆ. ಸಭೆಯಲ್ಲಿ ಅನ್ನಭಾಗ್ಯ ಯೋಜನೆಗೂ ಸಂಬಂಧಿಸಿದ ಮಹತ್ವದ ವಿಚಾರಗಳು ಚರ್ಚಿಸಲ್ಪಟ್ಟವು. ಅಕ್ಕಿಯ ಜೊತೆಗೆ ಪೌಷ್ಟಿಕ ಧಾನ್ಯಗಳು ಮತ್ತು ಅಗತ್ಯ ಆಹಾರ ಸಾಮಾಗ್ರಿಗಳನ್ನು ಒಳಗೊಂಡ ಕಿಟ್ ವ್ಯವಸ್ಥೆ ಮಾಡಲು ಸಿಎಂ ಸೂಚನೆ ನೀಡಿದರು. ಇದರ ಕುರಿತು ಶೀಘ್ರದಲ್ಲೇ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಆದೇಶಿಸಲಾಯಿತು.

Share This Article
Leave a Comment