ಬೆಂಗಳೂರು: ರಾಜ್ಯ ಸರ್ಕಾರದಿಂದ ಟ್ರಾಫಿಕ್ ದಂಡ ಬಾಕಿ ಉಳಿಸಿಕೊಂಡಿದ್ದಂತ ವಾಹನ ಸವಾರರಿಗೆ ಗುಡ್ ನ್ಯೂಸ್ ನೀಡಲಾಗಿದೆ. ರಾಜ್ಯದಲ್ಲಿ ಪೊಲೀಸ್ ಇಲಾಖೆಯವರು ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತದಲ್ಲಿ ರಿಯಾಯಿತಿ ಘೋಷಣೆ ಮಾಡಲಾಗಿದೆ.


ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್ನಲ್ಲಿ ದಿನಾಂಕ:11.02.2023 ರೊಳಗೆ ದಾಖಲಾದ ಪುಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ನಲ್ಲಿ ದಾಖಲಾಗಿರುವ ಪುಕರಣಗಳ ದಂಡದ ಬಾಕಿ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ ರಿಯಾಯಿತಿ ನೀಡಿ ಆದೇಶಿಸಲಾಗಿತ್ತು ಹಾಗೂ ಈ ರಿಯಾಯಿತಿಯು ದಿನಾಂಕ:09.09.2023ರವರೆಗೆ ಇತ್ಯರ್ಥಗೊಳ್ಳುವ ಪುಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ತಿಳಿಸಲಾಗಿತ್ತು.
ಪೊಲೀಸ್ ಇಲಾಖೆಯ ಸಂಚಾರಿ ಇ- ಚಲನ್ನಲ್ಲಿ ದಾಖಲಾಗಿರುವ ಬಾಕಿ ಪುಕರಣಗಳ ದಂಡದ ಮೊತ್ತದಲ್ಲಿ ಶೇ.50%ರಷ್ಟು ರಿಯಾಯಿತಿ ನೀಡಿ ಪುಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ದಿನಾಂಕ:05.07.2025 ರಿಂದ 11.07.2025ರವರೆಗೆ ಕಾಲಾವಕಾಶವನ್ನು ಕಲ್ಪಿಸಿ ಆದೇಶ ಹೊರಡಿಸುವಂತೆ ಕೋರಲಾಗಿರುತ್ತದೆ. ಮುಂದುವರೆದು ಸದರಿ ಅವಧಿಯು ಮುಕ್ತಾಯವಾಗಿರುವುದರಿಂದ ಸದರಿ ಕಾಲಾವಕಾಶವನ್ನು ದಿನಾಂಕ:23.08.2025 ರಿಂದ 12.09.2025ರವರೆಗೆ ಕಲ್ಪಿಸುವಂತೆ ಕೋರಿರುತ್ತಾರೆ.
