ಲಾರಿಯಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾವನ್ನು ಉಡುಪಿ ಸೆನ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಸುಮಾರು 65 ಕೆಜಿಯಷ್ಟು ಗಾಂಜಾವನ್ನು ಲಾರಿಯಲ್ಲಿ ತುಂಬಿಕೊAಡು ಸಾಗಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಪಡೆದ ಉಡುಪಿ ಸೆನ್ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ನೇತೃತ್ವದ ಪೊಲೀಸರ ತಂಡ ಕಿನ್ನಿಮೂಲ್ಕಿ ಸಮೀಪ ಹೆದ್ದಾರಿಯಲ್ಲಿ ಲಾರಿಯನ್ನು ತಡೆದು ನಿಲ್ಲಿಸಿದ್ದಾರೆ. ಈ ವೇಳೆ ಗಾಂಜಾ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
