ಅಪರಿಚಿತ ಸಾವುಗಳ ಕುರಿತು SIT ಕಚೇರಿ ತೆರಳಿ ದೂರು ನೀಡಿದ ಮಹೇಶ್ ಶೆಟ್ಟಿ ತಿಮರೋಡಿ

Prakhara News
1 Min Read

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆದುಕೊಳ್ಳುತ್ತಲೇ ಇದ್ದು, ನಿನ್ನೆ ಸೌಜನ್ಯ ಮಾವ ಹೆಣಗಳ ರಾಶಿ ಕುರಿತಂತೆ ಹೇಳಿಕೆ ನೀಡಿದ ಬೆನ್ನಲ್ಲೇ ಇದೀಗ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಧರ್ಮಸ್ಥಳ ಗ್ರಾಮದ ವಿವಿಧ ವಸತಿ ಗೃಹಗಳಲ್ಲಿ 2006 ರಿಂದ 2010 ರ ಅವಧಿಯಲ್ಲಿ ಸಂಭವಿಸಿದ ನಾಲ್ಕು “ಅಪರಿಚಿತ ಸಾವುಗಳ ಕುರಿತಂತೆ ತನಿಖೆ ನಡೆಸುವಂತೆ ವಿಶೇಷ ತನಿಖಾ ದಳ (SIT) ತಕ್ಷಣ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಎಸ್.ಐ.ಟಿ ಕಚೇರಿಗೆ ತೆರಳಿ ದೂರು ನೀಡಿದ್ದಾರೆ.

ಗುರುವಾರ ರಾತ್ರಿ ಬೆಳ್ತಂಗಡಿ ಎಸ್ ಐ ಟಿ ಕಚೇರಿಗೆ ಮಹೇಶ್ ಶೆಟ್ಟಿ ಭೇಟಿ ನೀಡಿದ್ದು, ಮಾಹಿತಿ ಹಕ್ಕು ಕಾಯ್ದೆಯಡಿ ಪಡೆದ ದಾಖಲೆಗಳನ್ನು ಆಧರಿಸಿ ಈ ದೂರನ್ನು ನೀಡಿದ್ದಾರೆ. ಇದರೊಂದಿಗೆ ಮಾಹಿತಿ ಹಕ್ಕಿನಲ್ಲಿ ಪಡೆದಿದ್ದ ದಾಖಲೆಗಳನ್ನು ನೀಡಿರುವುದಾಗಿ ತಿಳಿದು ಬಂದಿದೆ.

ಮಹೇಶ್ ಶೆಟ್ಟಿ ತಿಮರೋಡಿ ನೀಡಿರುವ ದೂರಿನಲ್ಲಿ ಗಾಯತ್ರಿ, ಶಾರಾವತಿ ಮತ್ತು ವೈಶಾಲಿ ವಸತಿ ಗೃಹಗಳಲ್ಲಿ ನಡೆದ ನಾಲ್ಕು ಸಾವುಗಳನ್ನು ಪ್ರಸ್ತಾಪಿಸಲಾಗಿದ್ದು, ಇವುಗಳನ್ನು “ಅಪರಿಚಿತ ಶವಗಳೆಂದು ಘೋಷಿಸಿ ಗ್ರಾಮ ಪಂಚಾಯತ್ ಮೂಲಕ ತರಾತುರಿಯಲ್ಲಿ ಸಮಾಧಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಪ್ರಕರಣಗಳಲ್ಲಿ ಕೇವಲ UDR (ಅಸ್ವಾಭಾವಿಕ ಮರಣ ವರದಿ) ದಾಖಲಿಸಲಾಗಿದ್ದು, ಕೊಲೆ ಅಥವಾ ಆತ್ಮಹತ್ಯೆಯ ಸಂಶಯವಿದ್ದರೂ ಎಫ್.ಐ‌.ಆರ್ ದಾಖಲಿಸದಿರುವುದು ಅನುಮಾನಗಳಿಗೆ ಕಾರಣವಾಗಿದೆ ಎಂದು ಮಹೇಶ್ ಶೆಟ್ಟಿ ತಿಮರೋಡಿ ದೂರಿನಲ್ಲಿ ತಿಳಿಸಿದ್ದಾರೆ.

Share This Article
Leave a Comment