ಬೆಳ್ತಂಗಡಿ: ಕೆಎಸ್‌ಆರ್‌ಟಿಸಿ ಬಸ್‌ಗೆ ಸ್ಕೂಟರ್ ಡಿಕ್ಕಿ- ಸವಾರ ಸಾವು

Prakhara News
1 Min Read

ಬೆಳ್ತಂಗಡಿ: ಬಂಟ್ವಾಳ-ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಕಾವಳಕಟ್ಟೆಯ ಬಳಿಯ ಎನ್‌ಸಿ ರಸ್ತೆಯ ಬಳಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ.

ಮೃತನನ್ನು ಬೆಳ್ತಂಗಡಿ ತಾಲೂಕಿನ ಬಜಿರೆ ಕ್ರಾಸ್ ಕಟ್ಟೆ ನಿವಾಸಿ ರಾಜೇಶ್ (36) ಎಂದು ಗುರುತಿಸಲಾಗಿದೆ.

ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಧರ್ಮಸ್ಥಳದಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ವಗ್ಗದಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ.

ರಾಜೇಶ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣ ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ದಾರಿ ಮಧ್ಯೆಯೇ ಅವರು ಮೃತಪಟ್ಟಿದ್ದಾರೆ. ಪುಂಜಾಲಕಟ್ಟೆ ಎಸ್‌ಐ ರಾಜೇಶ್ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

Share This Article
Leave a Comment