ನೇಣು ಬಿಗಿದು ಯುವತಿ ಆತ್ಮಹತ್ಯೆ..!!

Prakhara News
0 Min Read

ನೇಣು ಬಿಗಿದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಚೆಟ್ಟಳ್ಳಿ ಸಮೀಪದ ಕಂಡಕರೆಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಸಂಜನಾ(20) ಎಂದು ಗುರುತಿಸಲಾಗಿದೆ.

ಸೋಮವಾರ (ಸೆ.22) ಮನೆಯ ಎರಡನೇ ಮಹಡಿಯಲ್ಲಿರುವ ರೂಮಿನಲ್ಲಿ ನೇಣಿಗೆ ಶರಣಾಗಿದ್ದಾಳೆ. ಚೆಟ್ಟಳ್ಳಿ ಪೊಲೀಸ್ ಠಾಣಾಧಿಕಾರಿ ದಿನೇಶ್ ಅವರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಯುವತಿಯ ತಂದೆ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ, ಪೋಷಕರಿಗೆ ಮೃತದೇಹವನ್ನು ಹಸ್ತಾಂತರ ಮಾಡಲಾಗಿದೆ.

Share This Article
Leave a Comment