ಕೊರಗ ಯುವಜನರ ಉದ್ಯೋಗಕ್ಕೆ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ: ಸಮಸ್ಯೆಯನ್ನು ಆಲಿಸಿ ಭರವಸೆ ನೀಡಿದ ಶಾಸಕ ಮಂಜುನಾಥ ಭಂಡಾರಿ

Prakhara News
1 Min Read

ಉಡುಪಿ: ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕಳೆದ 23 ದಿನಗಳಿಂದ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ(ರಿ ) ಇವರ ವತಿಯಿಂದ ನಡೆಯುತ್ತಿರುವ ಕೊರಗ ಸಮುದಾಯದ ಯುವ ಜನರಿಗೆ ಸರಕಾರಿ ಉದ್ಯೋಗ ನೇರ ನೇಮಕಾತಿಗೆ ಒತ್ತಾಯಿಸಿ ನಿರಂತರ ಅಹೋರಾತ್ರಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಭೇಟಿಕೊಟ್ಟು ಸಮಸ್ಯೆಯನ್ನು ಆಲಿಸಿದರು. ಈ ವೇಳೆ ಕೊರಗ ಸಮುದಾಯದ ಯುವ ಜನರು ಸರಕಾರಿ ಉದ್ಯೋಗ ಪಡೆಯುವಲ್ಲಿ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಶೀಘ್ರವೇ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ಕರೆದು ಪರಿಹಾರ ಒದಗಿಸುವ ಭರವಸೆಯನ್ನು ನೀಡಿದರು.

ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹಾಗೂ ಕಾರ್ಯಾಧ್ಯಕ್ಷರಾದ ಕಿಶನ್ ಹೆಗ್ಡೆ, ರಾಜ್ಯ ಆರ್ ಜಿ ಪಿ ಆರ್ ಎಸ್ ಸಂಘಟನೆಯ ಉಪಾಧ್ಯಕ್ಷೆ ರೋಶನಿ, ಬ್ರಹ್ಮಾವರ ತಾಲೂಕು ಗ್ಯಾರಂಟಿ ಸಮಿತಿಯ ಸದಸ್ಯೆ ಡಾ. ಸುನಿತಾ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಚಿತ್ತರಂಜನ್ ಶೆಟ್ಟಿ, ಉಡುಪಿ ಜಿಲ್ಲಾ ಮೀನುಗಾರಿಕಾ ಸಮಿತಿಯ ಅಧ್ಯಕ್ಷ ವಿಶ್ವಾಸ್ ಅಮೀನ್, ಪೆರ್ಡೂರು ಗ್ರಾಮ ಪಂಚಾಯತ್ ಸದಸ್ಯರಾದ ನವೀನ್ ಸಾಲಿಯಾನ್, ಸ್ಥಳೀಯ ಮುಖಂಡರುಗಳು ಉಪಸ್ಥಿತರಿದ್ದರು.

Share This Article
Leave a Comment