ಮಂಗಳೂರು: ಕೊಳವೂರು ಕಡೆಗುಂಡ್ಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Prakhara News
1 Min Read

ಕೊಳವೂರು ಗ್ರಾಮದ ಕಡೆಗುಂಡ್ಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 20 ರಿಂದ 26 ರವರೆಗೆ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ದೇವಸ್ಥಾನದ ವಠಾರದಲ್ಲಿ ನಡೆಯಿತು .

ತಂತ್ರಿಗಳಾದ ಬ್ರಹ್ಮಶ್ರೀ ಸುಬ್ರಹ್ಮಣ್ಯ ಬಾಸ್ರಿತ್ತಾಯ ಮತ್ತು ಶ್ರೀ ಕೃಷ್ಣ ಉಪಾಧ್ಯಾಯರ ನೇತೃತ್ವದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ಗೋಪಾಲಕೃಷ್ಣ ಮಯ್ಯರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಿತು .

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜೀರ್ಣೋದ್ದಾದ ಸಮಿತಿಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ನಿಟ್ಟೆಗುತ್ತು ಎಂ.ಎನ್ ಅಡ್ಯಂತಾಯ ಅವರು ಮಾತನಾಡಿ , ದೇವರ ಅನುಗ್ರಹದಿಂದ ಬ್ರಹ್ಮಕಲಶ ನಡೆಸುವ ಪುಣ್ಯ ನಮಗೆ ಒದಗಿ ಬಂದಿದೆ . ಈ ಪುಣ್ಯ ಕಾರ್ಯದಲ್ಲಿ ಎಲ್ಲಾರೂ ಭೇಧವಿಲ್ಲದೆ ಒಗ್ಗಟ್ಟಾಗಿ ಭಾಗಿಯಾಗಿ ದೇವರ ಅನುಗ್ರಹಕ್ಕೆ ಪಾತ್ರರಾಗೋಣ ಎಂದು ಹೇಳಿದರು .
ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಶ್ರೀನಿವಾಸ್ ಶೆಟ್ಟಿ ನಾರ್ಯ ನಡಿಗುತ್ತು , ಉಪಾಧ್ಯಕ್ಷ ಸಂತೋಷ್ ರೈ ಮಾಣಿಬೆಟ್ಟುಗುತ್ತು , ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸೇವಾ ಸಮಿತಿಯ ಅಧ್ಯಕ್ಷ ಸತೀಶ್ ಪೂಜಾರಿ ಬಳ್ಳಾಜೆ , ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಹರಿಯಪ್ಪ ಮುತ್ತೂರು , ಅರಳ ಶ್ರೀ ಗರುಡ ಮಹಾಕಾಳಿ ದೇವಸ್ಥಾನದ ಜಗದೀಶ್ ಆಳ್ವ ಅಗ್ಗೊಂಡೆ ಈ ಸಂಧರ್ಭದಲ್ಲಿ ಮಾತನಾಡಿದರು . ಈ ಸಂದರ್ಭದಲ್ಲಿ ಹಿರಿಯರಾದ ಶರತ್ ಕುಮಾರ್ ಶೆಟ್ಟಿ . ಮುತ್ತೂರು ಪಂಚಾಯತಿ ಉಪಾಧ್ಯಕ್ಷರಾದ ಶ್ರೀಮತಿ ಸುಷ್ಮಾ. ಸದಸ್ಯರಾದ ಜಗದೀಶ್ ದುರ್ಗಾ ಕೋಡಿ,ಸಂತೋಷ್ ಆಳ್ವ ಕಂಗಿನಡಿ. ಗ್ರಾಮದ ಸಂಘ ಸಂಸ್ಥೆಯ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಸದಸ್ಯರು . ಗ್ರಾಮದ ಹಿರಿಯರು ಮುಖಂಡರು ಉಪಸ್ಥಿತರಿದ್ದರು.
ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ವಿಜಯಕುಮಾರ್ ಶೆಟ್ಟಿ ಮೇಗಿನ ಮನೆ ಪ್ರಾಸ್ತಾವಿಕ ಮಾತನಾಡಿದರು , ವಿಶ್ವನಾಥ ಪಂಜ ದೇವರ ಸ್ತುತಿ ಪಠಿಸಿದರು . ಬ್ರಹ್ಮಕಲಶೋತ್ಸವ ಸಮಿತಿಯ ಉಪಾಧ್ಯಕ್ಷ ಪ್ರವೀಣ್ ಆಳ್ವ ಗುಂಡ್ಯ ಕಾರ್ಯಕ್ರಮ ನಿರೂಪಿಸಿದರು. ದುಗ್ಗಪ್ಪ ಬಂಗೇರ ವಂದಿಸಿದರು .

Share This Article
Leave a Comment