ವಿಟ್ಲ – ಬೈಕ್ ಡಿಕ್ಕಿ ಹೊಡೆದು ಮಹಿಳೆ ಸಾವು, ಸವಾರ ಆಸ್ಪತ್ರೆಗೆ ದಾಖಲು

Prakhara News
0 Min Read

ವಿಟ್ಲ : ಬೈಕ್ ವೊಂದು ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಟ್ಲ ಬಸ್‌ಸ್ಟ್ಯಾಂಡ್ ಸಮೀಪ ನಡೆದಿದೆ.

ಅಪಘಾತದಲ್ಲಿ ಸಾವನ್ನಪ್ಪಿದ ಮಹಿಳೆಯನ್ನು ವಿಟ್ಲ ಮುಡ್ನೂರು ಗ್ರಾಮದ ಮರುವಾಳ ನಿವಾಸಿ ಸೀತಾ ಶೆಟ್ಟಿ (68) ಎಂದು ಗುರುತಿಸಲಾಗಿದೆ. ಪುತ್ತೂರು ಕಡೆಯಿಂದ ವಿಟ್ಲ ಕಡೆಗೆ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮೃತ ಸೀತಾ ಶೆಟ್ಟಿ ಅವರು ಓರ್ವ ಪುತ್ರ ರೂಪೇಶ್ ಹಾಗೂ ಪುತ್ರಿ ರೂಪಿತ ರನ್ನು ಅಗಲಿದ್ದಾರೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Share This Article
Leave a Comment