ಪ್ರಧಾನಿ ಮೋದಿ ಭೇಟಿ ಮಾಡಿದ ಇಂಡಿಯನ್‌ ಗ್ರಾಂಡ್ ಮುಪ್ತಿ ಕಾಂತಪುರಂ ಎಪಿ ಅಬೂಬಕರ್ ಮುಸ್ಲಿಯಾರ್

Prakhara News
0 Min Read

ನವದೆಹಲಿ: ಇಂಡಿಯನ್‌ ಗ್ರಾಂಡ್ ಮುಫಿ ಕಾಂತಪುರಂ ಎಪಿ ಅಬೂಬಕರ್ ಮುಸ್ಲಿಯಾರ್ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ವಿವಿಧ ಸಾಮಾಜಿಕ ವಿಷಯಗಳ ಕುರಿತು ಚರ್ಚೆ ನಡೆಸಿದರು.

ಈ ಬಗ್ಗೆ ಮುಸ್ಲಿಯಾ‌ರ್ ಅವರು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. “ಮಾನವೀಯತೆಯೊಂದಿಗೆ” ಎಂಬ ಶೀರ್ಷಿಕೆಯಡಿ ಇತ್ತೀಚೆಗೆ ಕೈಗೊಂಡ ಕೇರಳ ಯಾತ್ರೆಯ ಸಂದರ್ಭದಲ್ಲಿ ಸಮಾಜದ ವಿವಿಧ ವರ್ಗಗಳಿಂದ ವ್ಯಕ್ತವಾದ ಬೇಡಿಕೆಗಳು, ಕಳವಳಗಳು ಹಾಗೂ ವಿನಂತಿಗಳನ್ನು ಪ್ರಧಾನ ಮಂತ್ರಿಯವರ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದ್ದಾರೆ.

ಮುಂಬರುವ ರಮಝಾನ್ ಮಾಸದ ಸಂದೇಶವನ್ನೂ ಇದೇ ಸಂದರ್ಭದಲ್ಲಿ ಪ್ರಧಾನಿಗೆ ಹಂಚಿಕೊಂಡಿರುವುದಾಗಿ ಅವರು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

Share This Article
Leave a Comment