ಮಾ.14 ರಂದು ಎಸ್‌ಡಿಎಂ ಕಾನೂನು ಕಾಲೇಜಿನಪೂರ್ವ ವಿದ್ಯಾರ್ಥಿ ಸಂಘದ ಪದಗ್ರಹಣ

Prakhara News
1 Min Read

ಮಂಗಳೂರು : ನಗರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನ ಪೂರ್ವ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷ ರಾಘವೇಂದ್ರ ರಾವ್ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಮಾ.೧೪ರಂದು ಬೆಳಗ್ಗೆ ೯ಕ್ಕೆ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.

ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಡಾ. ತಾರಾನಾಥ ಅಧ್ಯಕ್ಷತೆ ವಹಿಸಲಿದ್ದಾರೆ. ಹೈಕೋರ್ಟ್ ವಕೀಲ ಪಿ.ಪಿ.ಹೆಗ್ಡೆ ವಿದ್ಯಾರ್ಥಿ ವೇತನ ವಿತರಿಸಲಿದ್ದಾರೆ. ಸುಪ್ರೀಂ ಕೋರ್ಟ್ ವಕೀಲ ರೋಹಿತ್ ರಾವ್ ಪೂರ್ವ ವಿದ್ಯಾರ್ಥಿ ಸಂಘದ ಲಾಂಛನ ಅನಾವರಣಗೊಳಿಸಲಿದ್ದಾರೆ. ಶಾಸಕ ವೇದವ್ಯಾಸ ಕಾಮತ್, ಎಂಎಲ್‌ಸಿ ಐವನ್ ಡಿಸೋಜಾ, ರೆಡ್‌ಕ್ರಾಸ್ ದ.ಕ. ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ, ಮಂಗಳೂರು ವಕೀಲರ ಸಂಘದ ಅಧ್ಯಕ್ಷ ರಾಘವೇಂದ್ರ ಎಚ್. ವಿ., ಪೂರ್ವ ವಿದ್ಯಾರ್ಥಿ ಸಂಘದ ನಿಕಟ ಪೂರ್ವ ಅಧ್ಯಕ್ಷ ಡಾ. ದೇವರಾಜ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Share This Article
Leave a Comment