ಮಂಗಳೂರು : ಗ್ಯಾಸ್ ಅಕ್ರಮ ಮರುಪೂರಣ, ಇಬ್ಬರ ಬಂಧನ

Prakhara News
1 Min Read

ಮಂಗಳೂರು: ನಗರದ ಕುದ್ರೋಳಿ ಕಂಡತ್‌ಪಳ್ಳಿ ಎಂಬಲ್ಲಿ ಗ್ಯಾಸ್ ಹಂಡೆಯಿಂದ ಇನ್ನೊಂದು ಗ್ಯಾಸ್ ಹಂಡೆಗೆ ಅಕ್ರಮವಾಗಿ ಗ್ಯಾಸ್ ಮರುಪೂರಣ ಮಾಡುತ್ತಿದ್ದ ಆರೋಪದ ಮೇರೆಗೆ ಇಬ್ಬರನ್ನು ಬಂದರು ಪೊಲೀಸರು ಬಂಧಿಸಿದ್ದಾರೆ.

ದಿನೇಶ್ ಸಾಲಿಯಾನ್ ಮತ್ತು ಸುನೀಲ್ ನಾಯಕ್ ಬಂಧಿತ ಆರೋಪಿಗಳಾಗಿದ್ದಾರೆ. ಮಾ.17ರಂದು ಮಧ್ಯಾಹ್ನ 1:30ಕ್ಕೆ ನಗರದ ನ್ಯೂಚಿತ್ರಾ ಜಂಕ್ಷನ್ ಬಸವನಗುಡಿ ಲಕ್ಷ್ಮೀನಾರಾಯಣ ಟೆಂಪಲ್ ಕಡೆಯಿಂದ ಕಂಡತ್‌ಪಳ್ಳಿ ಕಡೆಗೆ ಹೋಗುವ ರಸ್ತೆಯಲ್ಲಿರುವ ಗ್ಯಾಸ್ ಪಾಯಿಂಟ್ ವೊಂದರ ಪಕ್ಕದಲ್ಲಿರುವ ಗೋದಾಮಿನಲ್ಲಿ ಈ ಇಬ್ಬರು ಆರೋಪಿಗಳು ಅಕ್ರಮವಾಗಿ ಗ್ಯಾಸ್ ಸಿಲೆಂಡರ್‌ಗಳನ್ನು ಸಂಗ್ರಹಿಸಿ ದೊಡ್ಡ ಹಂಡೆಯಿಂದ ಸಣ್ಣ ಹಂಡೆಗೆ ಮರುಪೂರಣ ಮಾಡುತ್ತಿದ್ದರು ಎಂದು ಪ್ರಕರಣ ದಾಖಲಿಸಿರುವ ಪೊಲೀಸರು ಮಾಹಿತಿ ನೀಡಿದ್ದಾರೆ.ಆರೋಪಿಗಳನ್ನು ಬಂಧಿಸಿ ಸೊತ್ತುಗಳನ್ನು ವಶಪಡಿಸಲಾಗಿದೆ. ಈ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment