ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ಬಸ್ ಡಿವೈಡರ್ ಗೆ ಡಿಕ್ಕಿ: ನಾಲ್ವರು ಮೃತ್ಯು

Prakhara News
1 Min Read

ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಡಿವೈಡರ್‌ಗೆ ಬಸ್‌ ಡಿಕ್ಕಿಯಾಗಿ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಮೃತರನ್ನು ಕೇರಳ ಮೂಲದ ಮಹಮ್ಮದ್ ಪರಾನ್ (22), ರಫೀಜ್ (45) ಹಾಗೂ ಬೆಂಗಳೂರು ಮೂಲದ ರಶೀದ್(45), ಸಕೀರ್ (27) ಎಂದು ಗುರುತಿಸಲಾಗಿದೆ.ಕೇರಳ ಮೂಲದ ಟ್ರಾವೆಲ್ಸ್ ಕಂಪನಿಗೆ ಸೇರಿದ ಬಸ್‌ ಕೇರಳದಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಈ ವೇಳೆ ಚನ್ನಪಟ್ಟಣ ತಾಲೂಕಿನ ಪುಟ್ಟಪ್ಪನದೊಡ್ಡಿ ಬಳಿ ಬಸ್‌ ಡಿವೈಡರ್‌ಗೆ ಡಿಕ್ಕಿಯಾಗಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಚಾಲಕ ನಿದ್ದೆ ಮಂಪರಿನಲ್ಲಿ ಇದ್ದಿದ್ದರಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಮೃತದೇಹಗಳನ್ನು ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article
Leave a Comment