ಬೆಳ್ತಂಗಡಿ: ಬೈಕ್ ಅಫಘಾತ ಸಹ ಸವಾರ ಸಾವು…!

Prakhara News
1 Min Read

ಬೆಳ್ತಂಗಡಿ : ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮತ್ತು ಸಹಸವಾರ ಗಂಭೀರ ಗಾಯಗೊಂಡು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ ಸಹಸವಾರ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.

ಉಜಿರೆ -ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕಾಲೇಜ್ ರಸ್ತೆಯಲ್ಲಿರುವ ಪಂಚಮಿ ಲಾಡ್ಜ್ ಮುಂಭಾಗದ ಡಿವೈಡರ್ ಗೆ ಮಾ.28 ರಂದು ರಾತ್ರಿ ಸುಮಾರು 12:30 ಗಂಟೆಗೆ ಕಾರ್ಯಕ್ರಮ ಮುಗಿಸಿ ವಾಪಸ್ ಬರುತ್ತಿದ್ದಾಗ ಕೆ.ಟಿ.ಎಮ್ ಕಂಪನಿಯ ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ.


ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಅಮ್ಮನಂಗಡಿ ನಿವಾಸಿ ಚಂದ್ರಶೇಖರ್ ಪುತ್ರ ನಿತೇಶ್(19) ಮೃತಪಟ್ಟವನು ಎಂದು ಗುರುತಿಸಲಾಗಿದೆ. ಬೈಕ್‌ ಸವಾರ ಪುತ್ತೂರು ಇಡ್ತಿದು ನಿವಾಸಿ ಲಿಖಿತ್(20) ನಿವಾಸಿ ಗಂಭೀರ ಗಾಯಗೊಂಡು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಇಬ್ಬರು ಕೂಡ ಉಜಿರೆ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಾಗಿದ್ದಾರೆ. ಉಜಿರೆ ಕಾಲೇಜ್ ರಸ್ತೆಯಲ್ಲಿ ಅಪಘಾತ ನಡೆದ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ.

Share This Article
Leave a Comment