ಮಂಗಳೂರು: ಪ್ರಜ್ವಲ್ ಯುವಕ ಮಂಡಲ (ರಿ) ಸೂಟರಪೇಟೆ ಇದರ ಮಾಜಿ ಅಧ್ಯಕ್ಷರಾದ ಕಿಶೋರ್ ಕುಮಾರ್ ರವರು (ವ.46) ಮಂಗಳವಾರದಂದು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.


ಕಿಶೋರ್ ಕುಮಾರ್ ರವರು ಕನ್ಸ್ಟ್ರಕ್ಷನ್ ಸೈಟ್ ಸೂಪರ್ ವೈಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು ಮಂಗಳವಾರ ಪಾಣೆಮಂಗಳೂರಿನ ಸೈಟ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಅಂದು ಮಧ್ಯಾಹ್ನ ದ ಹೊತ್ತಿಗೆ ಅವರಿಗೆ ತೀವ್ರ ಎದೆ ನೋವು ಕಾಣಿಸಿಕೊಂಡಿದ್ದು ಸಹ ಉದ್ಯೋಗಿಗಳು ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಅಲ್ಲಿ ಅವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಕಿಶೋರ್ ರವರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರಜ್ವಲ್ ಯುವಕ ಮಂಡಲದ ಮಾಜಿ ಅಧ್ಯಕ್ಷರಾಗಿದ್ದು ಉತ್ತಮ ಸಂಘಟಕರಾಗಿ ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದರು.


ಕಳೆದ ವರ್ಷವಷ್ಟೇ ವಿವಾಹವಾಗಿದ್ದ ಕಿಶೋರ್ ಅವರ ಶ್ರೀಮತಿಯ ಸೀಮಂತ ಕಾರ್ಯಕ್ರಮವನ್ನು ಕೂಡ ಇತ್ತೀಚೆಗೆ ನಡೆಸಿದ್ದರು.
ಅವರ ಅಕಾಲಿಕ ಮರಣದಿಂದ ಮನೆಯವರು, ಸ್ನೇಹಿತರು ದಿಗ್ಭ್ರಮೆಗೊಂಡಿದ್ದು ಹಲವಾರು ಗಣ್ಯರು ಹಾಗೂ ಪ್ರಜ್ವಲ್ ಯುವಕ ಮಂಡಲದ ಸದಸ್ಯರು ಸಂತಾಪವನ್ನು ಸೂಚಿಸಿದ್ದಾರೆ.



