ಮಂಗಳೂರು: ಮಹಮ್ಮದ್ ಆಶಿಕ್ ಆತ್ಮಹತ್ಯೆಗೆ ಪ್ರೇಯಸಿಯ ಕಿರುಕುಳವೇ ಕಾರಣ…!

Prakhara News
0 Min Read

ಮಂಗಳೂರು: ಮೂಡುಶೆಡ್ಡೆಯ ಎದುರುಪದವು ನಿವಾಸಿ ಮಹಮ್ಮದ್ ಆಶಿಕ್(22) ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್​ಟ್​ ಸಿಕ್ಕಿದೆ. ಪ್ರೀತಿಸಿದ ಯುವತಿಯ ಕಿರುಕುಳವೇ ಸಾವಿಗೆ ಕಾರಣ ಎನ್ನಲಾಗಿದ್ದು, ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಯುವತಿ ಮತ್ತು ಆಕೆಯ ತಾಯಿ ಸೇರಿದಂತೆ ಮೂವರ ವಿರುದ್ಧ ಮಂಗಳೂರಿನ (Mangaluru) ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾರ್ಚ್ 21ರಂದು ಈದ್ ಹಬ್ಬದ ದಿನವೇ ಆಶಿಕ್​​ ಆತ್ಮಹತ್ಯೆ ಮಾಡಿಕೊಂಡಿದ್ದರು. ಆರಂಭದಲ್ಲಿ ಯಾವುದೋ ಕಾರಣಕ್ಕೆ ಮನನೊಂದು ಆಶಿಕ್​​ ಈ ನಿರ್ಧಾರ ಕೈಗೊಂಡಿರಬಹುದು ಎಂದು ಭಾವಿಸಲಾಗಿತ್ತಾದರೂ, ಮೊಬೈಲ್​​ ಪರಿಶೀಲನೆ ವೇಳೆ ಪ್ರೇಮ‌ ಪ್ರಕರಣ ಬೆಳಕಿಗೆ ಬಂದಿದೆ.

Share This Article
Leave a Comment