Minister MB Patil tour program
ಕೊಪ್ಪಳ ಜೂನ್ 02 (ಕರ್ನಾಟಕ ವಾರ್ತೆ): ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ಎಂ.ಬಿ ಪಾಟೀಲ್ ಅವರು ಜೂನ್ 03ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಸಚಿವರು ಅಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ಜಿಲ್ಲೆಯಿಂದ ನಿರ್ಗಮಿಸಿ ಮಧ್ಯಾಹ್ನ 12-30 ಗಂಟೆಗೆ ಕೊಪ್ಪಳಕ್ಕೆ ಆಗಮಿಸಿ, ನಗರದ ಗವಿಮಠಕ್ಕೆ ಭೇಟಿ ನೀಡುವರು. ಬಳಿಕ 1.30ಕ್ಕೆ ಕುಷ್ಟಗಿ ಮಾರ್ಗವಾಗಿ ಇಲಕಲ್ ಕಡೆಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಸಹಾಯಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.