Koppal: Free travel power scheme launched on June 11
ಕೊಪ್ಪಳ ಜೂನ್ 10 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯಾದ್ಯಂತ ಮಹಿಳೆಯರಿಗೆ ನಗರ ಸಾರಿಗೆ, ಸಾಮಾನ್ಯ ಹಾಗೂ ವೇಗದೂತ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಜೂನ್ 11ರಂದು ಚಾಲನೆ ನೀಡುವರು.
ಕೇಂದ್ರಿಯ ಬಸ್ ನಿಲ್ದಾಣದ ಆವರಣದಲ್ಲಿ ಮಧ್ಯಾಹ್ನ 12.30ಕ್ಕೆ ಕಾರ್ಯಕ್ರಮ ನಡೆಯಲಿದ್ದು, ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ಘನ ಉಪಸ್ಥಿತಿ ವಹಿಸುವರು. ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸುವರು.
ಸಂಸದರಾದ ಕರಡಿ ಸಂಗಣ್ಣ, ಶಾಸಕರಾದ ಬಸವರಾಜ ರಾಯರೆಡ್ಡಿ, ದೊಡ್ಡನಗೌಡ ಪಾಟೀಲ, ಜಿ.ಜನಾರ್ಧನ ರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ ನಮೋಶೀ, ಶರಣಗೌಡ ಪಾಟೀಲ ಬಯ್ಯಾಪೂರ, ಹೇಮಲತಾ ನಾಯಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮತ್ತು ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಟಿ.ಕೆ.ಅನಿಲಕುಮಾರ, ಸಾರಿಗೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು, ಜಿಪಂ ಸಿಇಓ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ, ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಎಂ.ರಾಚಪ್ಪ, ಕೊಪ್ಪಳ ವಿಭಾಗದ ವಿಭಾಗೀಯ ನಿಯಂತ್ರಾಣಾಧಿಕಾರಿ ಎಂ.ವೆಂಕಟೇಶ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.