ರಸ ಭರಿತ ಕಿತ್ತಳೆ ಹಣ್ಣಿನಲ್ಲಿ ವಿಟಮಿನ್ ಎ, ಸಿ ಮತ್ತು ಪೊಟ್ಯಾಶಿಯಂ,ರಂಜಕ, ಮೆಗ್ನೀಶಿಯಮ್, ಮ್ಯಾಂಗನೀಸ್, ಸೆಲೆನಿಯಮ್ ,ಥಯಾಮಿನ್, ರಿಬೋಫ್ಲವಿನ್, ನಿಯಾಸಿನ್, ವಿಟಮಿನ್ ಬಿ -6, ಫೊಲೇಟ್, ಪ್ಯಾಂಟೊಥೆನಿಕ್ ಆಮ್ಲ,ಫೋಲೇಟ್ ಮತ್ತು ಫೋಲಿಕ್ ಆಮ್ಲ ಗಳನ್ನು ಹೇರಳವಾಗಿ ಹೊಂದಿದೆ.
ಕಿತ್ತಳೆ ಹಣ್ಣಿನಲ್ಲಿ ವಿಟಮಿನ್ ಸಿ ಹೇರಳವಾಗಿರುವುದರಿಂದ ಚರ್ಮ ಹಾಗೂ ಕಣ್ಣಿನ ಆರೋಗ್ಯವನ್ನು ವೃದ್ದಿಸುತ್ತದೆ.
ಫೋಲೇಟ್ ಮತ್ತು ಫೋಲಿಕ್ ಆಮ್ಲ ಹೆಚ್ಚು ಸಮೃದ್ದವಾಗಿದೆ. ಗರ್ಭಿಣಿ ಆರೋಗ್ಯ ವೃದ್ದಿಗೆ ಸಹಕಾರಿಯಾಗಿದೆ. ಕಿತ್ತಳೆ ಹಣ್ಣು ಸೇವನೆಯಿಂದ ಕಾಲಜನ್ ಉತ್ಪದಿಸುತ್ತದೆ. ಈ ಕಾಲಜನ್ ಕೂದಲು ಉದುರುವಿಕೆ ಸಮಸ್ಯೆಯನ್ನು ನಿಯಂತ್ರಿಸುತ್ತದೆ.
ಈ ಹಣ್ಣಿನಲ್ಲಿ ಈ ಹಣ್ಣಿನಲ್ಲಿ ವಿಟಮಿನ್ ಸಿ, ವಿಟಮಿನ್ ಡಿ ಸೇರಿದಂತೆ ಹೆಚ್ಚು ಪೋಷಕಾಂಶ ಇರುವುದರಿಂದ ಇದು ದೇಹದ ಶಕ್ತಿ ಹೆಚ್ಚಿಸಿ ರೋಗ ನಿರೋಧಕ ಶಕ್ತಿಗೆ ಉಪಯುಕ್ತವಾಗಿದೆ. ದೇಹದ ದಾಹವನ್ನು ನೀಗಿಸಲು ಸಹಕರಿಸುತ್ತದೆ.