ಮ.ನ.ಪಾ ವ್ಯಾಪ್ತಿಯ 59 ನೇ ಜೆಪ್ಪು ಮಜಿಲ ವಾರ್ಡಿನ ನಾಗಬನ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಚಾಲನೆ

Prakhara News
1 Min Read

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 59ನೇ ಜೆಪ್ಪು ವಾರ್ಡಿನ ಮಜಿಲ ನಾಗಬನ ರಸ್ತೆ ಅಭಿವೃದ್ಧಿ ಕಾಮಗಾರಿಯು ರೂ. 1.59 ಕೋಟಿ ವೆಚ್ಚದಲ್ಲಿ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಗುದ್ದಲಿ ಪೂಜೆ ನಡೆಯಿತು

ಈ ವೇಳೆ ಮಾತನಾಡಿದ ಶಾಸಕರು, ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ-1 ನ್ನು ಅನುಷ್ಠಾನಗೊಳಿಸಿ ನೂರಕ್ಕೂ ಹೆಚ್ಚು ಕೋಟಿ ಅನುದಾನವನ್ನು ಮೀಸಲಿಡಲಾಗಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅದಕ್ಕೆ ತಡೆ ನೀಡಿತ್ತು. ಇದೀಗ ಸತತ ಪ್ರಯತ್ನದ ಫಲವಾಗಿ ಹಿಂದಿನ ಅನುದಾನಗಳು ಮತ್ತೆ ಬಿಡುಗಡೆಗೊಳ್ಳುತ್ತಿದ್ದು ಕ್ಷೇತ್ರದ ಅಭಿವೃದ್ಧಿಗೆ ಸದಾ ಬದ್ಧ ಎಂದರು.

ಈ ಸಂದರ್ಭದಲ್ಲಿ ನಿಕಟಪೂರ್ವ ಮನಪಾ ಸದಸ್ಯರಾದ ಭರತ್ ಕುಮಾರ್, ಸಂದೀಪ್ ಗರೋಡಿ, ಅಜಿತ್ ಡಿಸಿಲ್ವ, ನವೀನ್ ಶೆಣೈ, ಪ್ರವೀಣ್ ನಿಡ್ಡೇಲ್, ಸೇರಿದಂತೆ ಪಕ್ಷದ ಪ್ರಮುಖರು, ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.

Share This Article
Leave a Comment