ವಿಟ್ಲ: ಚಾಲಕ ನಿಯಂತ್ರಣ ತಪ್ಪಿ ಪಿಕಪ್ ವಾಹನವೊಂದು ಮನೆಯ ಮೇಲೆ ಬಿದ್ದು, ಮಹಿಳೆ ಮನೆಯೊಳಗೆ ಸಿಲುಕಿ ಗಂಭೀರ ಗಾಯಗೊಂಡ ಘಟನೆ ಪರಿಯಲ್ತಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ನಡೆದಿದೆ.
ವಿಟ್ಲದ ಕೂರೇಲು ಮದ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿರುವ ಮನೆಗೆ ಪಿಕಪ್ ವಾಹನ ಬಂದು ಬಿದ್ದಿದೆ.
ಘಟನೆಯ ವೇಳೆ ಮನೆಯೊಳಗೆ ಮಹಿಳೆ ಮಲಗಿದ್ದರು ಎನ್ನಲಾಗಿದ್ದು, ಅವರು ಗಂಭೀರ ಸ್ಥಿತಿಯಲ್ಲಿದ್ದಾರೆ.
ಈ ಅವಘಡದಿಂದ ಮನೆಗೆ ಸಂಪೂರ್ಣ ಹಾನಿಯಾಗಿದೆ.
ವಾಹನವನ್ನು ತೆರವು ಮಾಡದ ಕಾರಣ ಮಹಿಳೆಯನ್ನು ಹೊರ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿತ್ತು.
ಬಳಿಕ ಸ್ಥಳಕ್ಕೆ ಆಗಮಿಸಿದ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಬೀಡು ಬಿಟ್ಟಿದ್ದು, ಕ್ರೇನ್ ಬಳಸಿ ವಾಹನ ಮೇಲೆತ್ತುವ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.