ಬೆಂಗಳೂರು: ಸದನದಲ್ಲಿ ಅತಿರೇಕವಾಗಿ ವರ್ತಿಸಿದ ಬಿಜೆಪಿಯ 10 ಶಾಸಕರನ್ನು ಅಮಾನತು ಮಾಡಿ ಸ್ವೀಕರ್ ಆದೇಶ ಹೊರಡಿಸಿದ್ದಾರೆ.
ಅಶ್ವತ್ಥ ನಾರಾಯಣ, ಆರ್.ಅಶೋಕ್, ವೇದವ್ಯಾಸ ಕಾಮತ್, ಅರಗಜ್ಞಾನೇಂದ್ರ, ಸುನೀಲ್ ಕುಮಾರ್, ಅರವಿಂದ ಬೆಲ್ಲದ್, ಯಶ್ಪಾಲ್ ಸುವರ್ಣ, ಧೀರಜ್ ಮುನಿರಾಜ್, ಉಮಾನಾಥ್ ಕೋಟ್ಯಾನ್, ಭರತ್ ಶೆಟ್ಟಿಯವರ ಹೆಸರನ್ನು ಉಲ್ಲೇಖಿಸಿದ ಸ್ಪೀಕರ್ ಯು.ಟಿ ಖಾದರ್ ಅಮಾನತು ಮಾಡಿ ಆದೇಶ ಹೊರಡಿಸಿದರು.
ಬಿಜೆಪಿ ಸದಸ್ಯರು ಡೆಪ್ಯುಟಿ ಸ್ಪೀಕರ್ ಮೇಲೆ ವಿದೇಯಕದ ಕಾಗದ ಪತ್ರ ಹರಿದು ಎಸೆದಿದ್ದು, ಈ ಬಗ್ಗೆ ಸ್ಪೀಕರ್ಗೆ ಬಿಜೆಪಿ ಶಾಸಕರ ವಿರುದ್ಧ ಕಾಂಗ್ರೆಸ್ ಸದಸ್ಯರು ದೂರು ನೀಡಿದ್ದರು.
ಇದಲ್ಲದೆ ಸದನವನ್ನು 10 ನಿಮಿಷಗಳ ಕಾಲ ಸ್ಪೀಕರ್ ಮುಂದೂಡಿದ್ದಾರೆ. ಇದಕ್ಕೂ ಮೊದಲು, ಸ್ಪೀಕರ್ ಯು.ಟಿ.ಖಾದರ್ ವಿರುದ್ಧ ನಿಲುವಳಿ ಸೂಚನೆ ಮಂಡಿಸಲು ಪ್ರತಿಪಕ್ಷ ಮುಂದಾಗಿತ್ತು.