ಕಾರ್ಕಳ: ಟಿಪ್ಪರ್ ಲಾರಿ ಮತ್ತು ಖಾಸಗಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬಸ್ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳದ ಜಾರ್ಕಳ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.
ಕಾರ್ಕಳ ತಾಲೂಕಿನ ಜಾರ್ಕಳ ಎಂಬಲ್ಲಿಯ ಬಸ್ರಿ ಶಾಲೆಯ ಬಳಿ ಈ ಅಪಘಾತ ಸಂಭವಿಸಿದೆ. ಉಡುಪಿ ಕಡೆಯಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಸರಕಾರಿ ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಟಿಪ್ಪರ್ ಗೆ ಢಿಕ್ಕಿ ಹೊಡೆದಿದೆ. ಇದರಿಂದ ಬಸ್ಸಿನ ಮುಂಭಾಗ ತೀವ್ರ ಜಖಂಗೊಂಡಿದ್ದು, ಬಸ್ ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ಸಿನ ಪ್ರಯಾಣಿಕರು ಹಾಗೂ ಟಿಪ್ಪರ್ ಚಾಲಕ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಕಾರ್ಕಳ ನಗರ ಠಾಣೆ ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.