ಕಾರಿನಲ್ಲಿ ಖೋಟಾ ನೋಟು ಸಾಗಾಟ: ಬಂಟ್ವಾಳದಲ್ಲಿ ಇಬ್ಬರ ಬಂಧನ

Prakhara News
1 Min Read

ಬಂಟ್ವಾಳ : ಬಡಗಕಜೆಕ್ಕಾರು ಗ್ರಾಮದ ಪಾಂಡವರಕಲ್ಲು ಬಳಿಯ ಕೂಮಿನಡ್ಕ ಎಂಬಲ್ಲಿ ಅಕ್ರಮವಾಗಿ ಖೋಟಾ ನೋಟುಗಳನ್ನು ಚಲಾವಣೆ ಮಾಡಲು ಸಂಗ್ರಹಿಸಿಟ್ಟಿದ್ದ ಇಬ್ಬರು ಆರೋಪಿಗಳನ್ನು ಪುಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಬಂಧಿತರನ್ನು ಮುಹಮ್ಮದ್ ಸಮೀರ್ (28) ಮತ್ತು ಮಹಮ್ಮದ್ ಇರ್ಫಾನ್ (26) ಎಂದು ಗುರುತಿಸಲಾಗಿದ್ದು, ಮತ್ತೊಬ್ಬ ಆರೋಪಿ ರಶೀದ್ ಕುಂಡಡ್ಕ ಎಂಬಾತ ಪರಾರಿಯಾಗಿದ್ದಾನೆ. ಮೇ 1ರಂದು ಸ್ವಿಫ್ಟ್ ಕಾರಿನಲ್ಲಿ ಖೋಟಾ ನೋಟುಗಳನ್ನು ಇಟ್ಟುಕೊಂಡಿರುವ ಬಗ್ಗೆ ಸಿಕ್ಕ ಖಚಿತ ಮಾಹಿತಿ ಹಿನ್ನಲೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತರಿಂದ 2,38,000 ಮೌಲ್ಯದ 500 ರೂ. ಮುಖಬೆಲೆಯ ಖೋಟಾ ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ.

Share This Article
Leave a Comment