ರೇಣುಕಾಸ್ವಾಮಿ ಕೊಲೆ ಪ್ರಕರಣ: ಸುಪ್ರೀಂಕೋರ್ಟ್ ನಲ್ಲಿ ಇಂದು ದರ್ಶನ್ ಜಾಮೀನು ಅರ್ಜಿ ವಿಚಾರಣೆ.

Prakhara News
1 Min Read
Oplus_0

ಬೆಂಗಳೂರು : ನಟ ದರ್ಶನ್ ಸಲ್ಲಿಸಿರುವ ಹೊಸ ಜಾಮೀನು ಅರ್ಜಿಯ ವಿಚಾರಣೆ ಸೋಮವಾರ (ಮೇ 4) ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎಂಟು ತಿಂಗಳು ಕಳೆದರೂ ಕೇವಲ 15 ಸಾಕ್ಷಿಗಳ ವಿಚಾರಣೆ ಮಾತ್ರ ನಡೆದಿರುವುದನ್ನು ಕಾರಣವಾಗಿಟ್ಟುಕೊಂಡು ದರ್ಶನ್ ಜಾಮೀನು ಕೋರಿದ್ದಾರೆ. ನ್ಯಾಯಮೂರ್ತಿ ಪರ್ದೀವಾಲ್ ನೇತೃತ್ವದ ಪೀಠ ಈ ಅರ್ಜಿಯನ್ನು ವಿಚಾರಣೆ ಮಾಡಲಿದೆ.

2025ರ ಆಗಸ್ಟ್ 14ರಂದು ಸುಪ್ರೀಂ ಕೋರ್ಟ್ ದರ್ಶನ್‌ ಸೇರಿದಂತೆ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ರದ್ದುಗೊಳಿಸಿತ್ತು. ಆದರೆ ಎಂಟು ತಿಂಗಳು ಕಳೆದರೂ ವಿಚಾರಣೆಯ ಪ್ರಗತಿ ಅತ್ಯಂತ ನಿಧಾನವಾಗಿದೆ ಎಂದು ದರ್ಶನ್ ಪರ ವಕೀಲರು ಹೊಸ ಅರ್ಜಿಯಲ್ಲಿ ತಿಳಿಸಿದ್ದಾರೆ.

273 ಸಾಕ್ಷಿಗಳ ಪೈಕಿ ಕೇವಲ 15 ಸಾಕ್ಷಿಗಳ ವಿಚಾರಣೆ ಮಾತ್ರ ಪೂರ್ಣಗೊಂಡಿದೆ. ಈ ವೇಗದಲ್ಲಿ ವಿಚಾರಣೆ ಮುಗಿಯಲು ಹಲವು ವರ್ಷಗಳು ಬೇಕಾಗುತ್ತದೆ ಎಂದು ದರ್ಶನ್ ಪರ ವಕೀಲರು ವಾದಿಸಿದ್ದಾರೆ. ಈ ಕಾರಣದಿಂದ ದರ್ಶನ್‌ಗೆ ಜಾಮೀನು ಮಂಜೂರು ಮಾಡಬೇಕು ಎಂದು ಮನವಿ ಮಾಡಲಾಗಿದೆ.

Share This Article
Leave a Comment