ಬೆಳ್ತಂಗಡಿ: ಯಕ್ಷಗಾನ ಕಲಾವಿದರು ಮತ್ತು ಅವರ ಪಾಲಕರಿಗೆ ಅವಹೇಳನ ಹಾಗೂ ಬೆದರಿಕೆ ಹಾಕಿರುವ ಕುರಿತು ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಮಂಗಳೂರಿನ ಆರನೇ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದಲ್ಲಿ ವಜಾಗೊಂಡಿದೆ.


ಯಕ್ಷಗಾನ ಕಲಾವಿದ ಪ್ರಜ್ವಲ್ ಕುಮಾರ್ ಜತೆ ಮೊಬೈಲ್ನಲ್ಲಿ ಮಾತನಾಡುವ ವೇಳೆ ಮಹೇಶ್ ಶೆಟ್ಟಿ ತಿಮರೋಡಿ, ಯಕ್ಷಗಾನ ಕಲಾವಿದ ದಿನೇಶ್ ಕೋಡಪದವು ಹಾಗೂ ಅವರ ತಾಯಿಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು. ಈ ಬಗ್ಗೆ ದಿನೇಶ್ ಅವರ ತಾಯಿ ಲೀಲಾವತಿ ಶೆಟ್ಟಿಗಾರ್ ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಿದ್ದರು. ಕಲಾವಿದರಾದ ಸುಂದರ ರೈ, ಪ್ರಜ್ವಲ್ ಕುಮಾರ್ ಅವರಿಗೂ ಬೈದಿರುವ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ಸರ್ಕಾರಿ ಅಭಿಯೋಜಕ ಮೋಹನ್ ಕುಮಾರ್ ಬಿ. ವಾದ ಮಂಡಿಸಿದ್ದರು.



