ಮೇ.16 ರಂದು ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿ ಪ್ರದಾನ ಹಾಗೂ ಕನ್ನಡ ಸಂಸ್ಕೃತಿ ಉತ್ಸವ

Prakhara News
1 Min Read
Oplus_2

ಕಾಸರಗೋಡು :  ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಸಂಯುಕ್ತ ಆಶ್ರಯದಲ್ಲಿ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿ ಪ್ರದಾನ ಹಾಗೂ ಕನ್ನಡ ಸಂಸ್ಕೃತಿ ಉತ್ಸವ ಮೇ 16 ರಂದು ಬೆಳಗ್ಗೆ 9 ಗಂಟೆಯಿಂದ ಸುಬ್ಬಯ್ಯಕಟ್ಟೆ ಕುಡಾಲ್ ಮೇರ್ಕಳದ ಕುಡಾಲು ಅನುದಾನಿತ ಕಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯಲಿದೆ ಎಂದು ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ರವಿ‌ ನಾಯ್ಕಪು  ತಿಳಿಸಿದರು.

ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ 18 ಮಂದಿಗೆ ದತ್ತಿನಿಧಿ ಪ್ರಶಸ್ತಿಯನ್ನು ಪುರಸ್ಕಾರ ಮಾಡಲಾಗುವುದು . ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಸಣ್ಣ ನಿರಾವರಿ ಸಚಿವ ಎನ್.ಎಸ್. ಭೋಸರಾಜು ಉದ್ಘಾಟಿಸಲಿದ್ದು, ನಿಯೋಜಿತ ಮಂಜೇಶ್ವರ ಶಾಸಕ ಎ.ಕೆ.ಎಂ. ಆಶ್ರಫ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಕರ್ನಾಟಕ ವಿಧಾನಸಭೆಯ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ದತ್ತಿನಿಧಿ ಪ್ರಶಸ್ತಿ ಪ್ರದಾನ ಮಾಡಲಿದ್ದು, ಸೋಮಣ್ಣ ಬೇವಿನಮರದ ಗಡಿನಾಡ ಸಾಧಕರನ್ನು ಸನ್ಮಾನಿಸಲಿದ್ದಾರೆ.

ಕರ್ನಾಟಕ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಪತ್ರಕರ್ತರ ಗುರುತುಚೀಟಿ ವಿತರಿಸಲಿದ್ದು, ದುಬೈನ ಶಾಫಿ ಬಂಡಸಾಲ ಅವರ ‘ಮನದಾಳದಿಂದ’ ಪುಸ್ತಕವನ್ನು ಬಿಡುಗಡೆಗೊಳಿಸಲಾಗುವುದು. ಕರ್ನಾಟಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಹೀದ್ ಪುಸ್ತಕ ಬಿಡುಗಡೆ ನೆರವೇರಿಸಲಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಾಸರಗೋಡು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಾಬು ಅಬ್ರಹಾಂ, ಸದಸ್ಯ ಸೋಮಶೇಖರ್ ಜೆ.ಎಸ್,ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಶಿವಾನಂದ ತಗಡೂರು, ಪ್ರಾರ್ಥನಾ ವರ್ಲ್ಡ್ ಸ್ಕೂಲ್ ಅಧ್ಯಕ್ಷ ಕರ್ಣ ಬೆಳಗೆರೆ ಸೇರಿದಂತೆ ಹಲವರು ಗಣ್ಯರು ಭಾಗವಹಿಸಲಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಪ್ರದೀಪ್ ಕುಮಾರ್ ಕಲ್ಕೂರ , ಸಂಸ್ಥಾಪಕರು ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ‌ಅಕಾಡೆಮಿ,  ಸ್ವಾಗತ ಸಮಿತಿಯ ಪ್ರಧಾನ ಸಂಚಾಲಕ ಅಶೋಕ ಭಂಡಾರಿ ಕುಡಾಲ್, ಕೆ.ಯು.ಡಬ್ಲ್ಯೂ.ಜೆ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ರಾಧಾಕೃಷ್ಣ ಕೆ. ಉಳಿಯತಡ್ಕ, ಕೆ.ಯು.ಡಬ್ಲ್ಯೂ.ಜೆ ಕಾಸರಗೋಡು ಅಧ್ಯಕ್ಷ ಎ.ಆರ್. ಸುಬ್ಬಯಕಟ್ಟೆ, ಸದಸ್ಯರಾದ ರಾಘವ ಚೇರಾಲ್  ಉಪಸ್ಥಿತರಿದ್ದರು.

Share This Article
Leave a Comment