Home ಸಿನೆಮಾ ನಟ ಉಪೇಂದ್ರ ವಿರುದ್ಧ ಜಾತಿ ನಿಂದನೆ ಪ್ರಕರಣ : FIR ರದ್ದು ಕೋರಿ ಹೈ ಕೋರ್ಟ್...

ನಟ ಉಪೇಂದ್ರ ವಿರುದ್ಧ ಜಾತಿ ನಿಂದನೆ ಪ್ರಕರಣ : FIR ರದ್ದು ಕೋರಿ ಹೈ ಕೋರ್ಟ್ ಮೊರೆ ಹೋದ ಉಪೇಂದ್ರ

0

ಬೆಂಗಳೂರು : ನಟ ಉಪೇಂದ್ರ ವಿರುದ್ಧ ಜಾತಿನಿಂದಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್ ಮೊರೆ ಹೋಗಿದ್ದು, ಮಧ್ಯಂತರ ತಡೆಯಾಜ್ಞೆ ನೀಡಿ ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ ಎನ್ನಲಾಗುತ್ತಿದೆ.


ಈ ಕುರಿತು ಉಪೇಂದ್ರ ಅವರು ‘ಸಮುದಾಯದ ವಿರುದ್ಧ ನಾನು ಅವಹೇಳನಕಾರಿ ಹೇಳಿಕೆ ನೀಡಿಲ್ಲ.

ಒಳ್ಳೇದನ್ನು ಮಾಡುವಾಗ ಟೀಕಿಸುವರು ಇದ್ದೇ ಇರುತ್ತಾರೆ.ಈ ಮಾತಿಗೆ ಪೂರಕವಾಗಿ ಮಾತ್ರವೇ ಗಾದೆ ಬಳಸಲಾಗಿದೆ ಹೊರತು ಆಕ್ಷೇಪ ವ್ಯಕ್ತವಾದ ಕೂಡಲೇ ಡಿಲೀಟ್ ಮಾಡಿ ಕ್ಷಮೆ ಕೇಳಿದ್ದೇನೆ.

ಹಳೆಯ ಗಾದೆ ಮಾತನ್ನು ಉಲ್ಲೇಖಿಸಿದ್ದು ಜಾತಿ ನಿಂದನೆ ಅಲ್ಲ. ಪ್ರಚಾರ ಪಡೆಯಲೆಂದು ಉಪೇಂದ್ರ ದೂರು ದಾಖಲಿಸಿದ್ದಾರೆ. ವಾಟ್ಸಪ್ ಮೂಲಕ ಪೊಲೀಸರು ನೋಟಿಸ್ ಕಳುಹಿಸಿದ್ದಾರೆ. ಹೀಗಾಗಿ FIR ರದ್ದು ಕೋರಿ ಮನವಿ ಮಾಡಿದ್ದಾರೆ.

ಇದಕ್ಕೂ ಮುಂಚೆ ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಿಂದ ದೂರುದಾರರ ಸಮ್ಮುಖದಲ್ಲಿ ಉಪೇಂದ್ರ ಅವರ ನಿವಾಸದಲ್ಲಿ ಪೊಲೀಸರು ಸ್ಥಳ ಮಹಜರು ನಡೆಸಿದ್ದರು.

LEAVE A REPLY

Please enter your comment!
Please enter your name here