ಬೈಕಂಪಾಡಿ ಮೊಬೈಲ್ ಅಂಗಡಿ ಕಳವು ಪ್ರಕರಣ: 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅಸ್ಸಾಂ ಮೂಲದ ಆರೋಪಿ ಬಂಧನ

Prakhara News
1 Min Read

ಮಂಗಳೂರು : ಬೈಕಂಪಾಡಿಯ ಮೊಬೈಲ್ ಅಂಗಡಿಯೊಂದರಲ್ಲಿ ಕಳವು ನಡೆಸಿ ಕಳೆದ ಆರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪಣಂಬೂರು ಪೊಲೀಸರು ಕೇರಳದ ಮಂಜೇಶ್ವರದಲ್ಲಿ ಬಂಧಿಸಿದ್ದಾರೆ.

ಅಸ್ಸಾಂ ರಾಜ್ಯದ ಕಾಚಾರ್ ಜಿಲ್ಲೆಯ ಪಾರೂಲ್ ಹುಸೈನ್ ಲಸ್ಕರ್ ಯಾನೆ ಪಾರೂಲ್ (34) ಬಂಧಿತ ಆರೋಪಿ. ಈತ 2018ರಲ್ಲಿ ಮಂಗಳೂರು ತಾಲ್ಲೂಕಿನ ಬೈಕಂಪಾಡಿಯ ಕುಡುಂಬೂರು ಎಂಬಲ್ಲಿರುವ ‘ಪೂಜಾ ಮೊಬೈಲ್ಸ್’ ಅಂಗಡಿಯ ಬೀಗ ಮುರಿದು ಸುಮಾರು ₹2.17 ಲಕ್ಷ ಮೌಲ್ಯದ ಮೊಬೈಲ್ ಫೋನ್‌ಗಳು, ಬಿಡಿಭಾಗಗಳು ಮತ್ತು ನಗದನ್ನು ಕಳವು ಮಾಡಿದ್ದಲ್ಲದೆ, ಕಂಪ್ಯೂಟರ್ ಗಳನ್ನು ಒಡೆದು ಹಾನಿ ಮಾಡಿದ್ದ ಎನ್ನಲಾಗಿದೆ.

ಈ ಕುರಿತು ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜಾಮೀನು ಪಡೆದ ಬಳಿಕ ಆರೋಪಿಯು ವಿಚಾರಣೆಗೆ ಹಾಜರಾಗದೆ 2018 ರಿಂದ ತಲೆಮರೆಸಿಕೊಂಡಿದ್ದರಿಂದ ನ್ಯಾಯಾಲಯವು ದಸ್ತಗಿರಿ ವಾರಂಟ್ ಹೊರಡಿಸಿತ್ತು. ಮೇಲಾಧಿಕಾರಿಗಳ ನಿರ್ದೇಶನದಂತೆ ಪಣಂಬೂರು ಇನ್ಸ್‌ಪೆಕ್ಟರ್ ಮೊಹಮ್ಮದ್ ಸಲೀಂ ಅಬ್ಬಾಸ್ ನೇತೃತ್ವದ ತಂಡ, ಸೋಮವಾರ (ಮೇ 11) ಮಂಜೇಶ್ವರದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Share This Article
Leave a Comment