ಮಂಗಳೂರು: ವಿಎಚ್ಪಿ ಮುಖಂಡ ಶರಣ್ ಪಂಪ್ ವೆಲ್ ವಿರುಧ್ಧ ಪೊಲೀಸರ ಸ್ವಯಂಪ್ರೇರಿತ ಎಫ್ಐಆರ್ಗೆ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಅಕ್ಟೋಬರ್ 16ರಂದು ಮಂಗಳಾದೇವಿಯ ರಥಬೀದಿಯ ಹಿಂದೂಗಳ ಸಂತೆ ವ್ಯಾಪಾರದ ಹಿಂದೂಗಳ ಅಂಗಡಿಗಳಿಗೆ ಭಗವಾಧ್ವಜ ಅಳವಡಿಸಿ ಎಲ್ಲಾ ಹಿಂದೂಗಳು ಇಲ್ಲಿಯೇ ವ್ಯಾಪಾರ ಮಾಡಬೇಕೆಂದು ಶರಣ್ ಪಂಪ್ವೆಲ್ ಮತ್ತಿತರರ ಮತೀಯ ಸೌಹಾರ್ದಕ್ಕೆ ಧಕ್ಕೆ ತರುವ ಚಟುವಟಿಕೆ ನಡೆಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಮಂಗಳೂರಿನ ಪಾಂಡೇಶ್ವರ ಪೊಲೀಸರು ದಾಖಲಿಸಿದ್ದ ಸ್ವಯಂ ಪ್ರೇರಿತವಾಗಿ ಐಪಿಸಿ ಸೆಕ್ಷನ್ 153A, 34 ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದರು. ಈ ಮೂಲಕ ಶಾಂತಿಭಂಗ ಹಾಗೂ ಕೋಮು ಪ್ರಚೋದನೆ ಆರೋಪದಡಿ ಪ್ರಕರಣ ದಾಖಲಾಗಿತ್ತು. ಈ ಎಫ್ಐಆರ್ ರದ್ದು ಕೋರಿ ಶರಣ್ ಪಂಪ್ ವೆಲ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದ್ದರಿಂದ ಸಂಬಂಧಪಟ್ಟವರಿಗೆ ನೋಟೀಸ್ ಜಾರಿ ಮಾಡಿ ಮುಂದಿನ ವಿಚಾರಣೆವರೆಗೆ ಹೈಕೋರ್ಟ್ ಎಫ್ಐಆರ್ಗೆ ತಡೆಯಾಜ್ಞೆ ನೀಡಿದೆ.