Home ಕರಾವಳಿ ಮಕ್ಕಳ ದಿನಾಚರಣೆ ಪ್ರಯುಕ್ತ ಪ್ರತಿಭಾ ಪುರಸ್ಕಾರ- ಕ್ರೀಡಾ ಕೂಟ

ಮಕ್ಕಳ ದಿನಾಚರಣೆ ಪ್ರಯುಕ್ತ ಪ್ರತಿಭಾ ಪುರಸ್ಕಾರ- ಕ್ರೀಡಾ ಕೂಟ

0

ಜ್ಯೋತಿ ಯುವಕ ಮತ್ತು ಜ್ಯೋತಿ ಮಹಿಳಾ ಮಂಡಲ (ರಿ) ಕಾಳಿಕಾಂಬ ಇವರ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮತ್ತು ಪ್ರೌಢಶಾಲಾ ಮಕ್ಕಳಿಗೆ ವಿವಿದ ಸ್ಪರ್ಧೆಗಳು ಕಾಳಿಕಾಂಬ ಜ್ಯೊತಿ ಮೈದಾನದಲ್ಲಿ ಅಯೋಜಿಸಲಾಗಿದ್ದು ರೋಟರಿ‌ ಕ್ಲಬ್ ಮಾಜಿ ಅಧ್ಯಕ್ಷೆ ರೇಖಾ ಉಪಾಧ್ಯಾಯ ಉದ್ಘಾಟಿದರು.

ಸಂಜೆ ನಡೆದ ಸಮಾರೋಪ ಸಮಾರಂಬದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿ.ಯು.ಸಿ ಯಲ್ಲಿ ಶೇಕಡಾ 85 ಕಿಂತ ಹೆಚ್ಚು ಅಂಕ ಪಡೆದ ಪ್ರತಿಭಾನ್ವಿತ 5 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕನ್ನಡ ಹಾಗೂ ತುಳು ಸಿನೆಮಾ ನಟ ಜಿನ ಪ್ರಸಾದ್ ಧರ್ಮಸ್ಥಳ ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು, ಮತ್ತೊರ್ವ ಅತಿಥಿ ಇ ಲಾಜಿಕ್ ಎಸ್ ಎ ಆರ್ ಎಲ್ ಮ್ಯಾನೇಜಿಂಗ್ ಡೈರೆಕ್ಟರ್ ದಿನೇಶ್ ಶೆಟ್ಟಿ ವಿಜೇತ ಮಕ್ಕಳಿಗೆ ಬಹುಮಾನಗಳನ್ನು ವಿತರಿಸಿದರು. ಈ ಸಂದರ್ಬದಲ್ಲಿ ಯುವಕ ಮಂಡಲದ ಅದ್ಯಕ್ಷ ಸುಧಾಕರ್ ಕೋಟ್ಯಾನ್, ಮಹಿಳಾ ಮಂಡಲದ ಅದ್ಯಕ್ಷೆ ದಿವ್ಯಾ ಶುಭದ, ಗೌರವಾದ್ಯಕ್ಷೆ ಯಶ, ಕ್ರೀಡಾ ಕಾರ್ಯದರ್ಶಿಗಳಾದ ಪ್ರಕಾಶ್ ಸುರೈ, ಶ್ವೇತಾ ಸುರೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು ಶಿಕ್ಷಕ ಹರೇಂದ್ರರಾವ್ ಸನ್ಮಾನಿತರ ವಿವರವನ್ನು ವಾಚಿಸಿದರು ಶುಭದರಾವ್ ಕಾರ್ಯಕ್ರಮವನ್ನು ನಿರ್ವಹಿಸಿದರು.

LEAVE A REPLY

Please enter your comment!
Please enter your name here