ಉಜಿರೆ: 9 ನೇ ತರಗತಿಯ ವಿದ್ಯಾರ್ಥಿನಿ ಆತ್ಮಹತ್ಯೆ..!

Prakhara News
1 Min Read

ಉಜಿರೆ: ಇಲ್ಲಿನ ಶಿವಾಜಿನಗರದ 5ನೇ ಅಡ್ಡರಸ್ತೆಯಲ್ಲಿ ಇಂದು (ಜೂನ್ 1) ಬೆಳಿಗ್ಗೆ ವಿಷಾದನೀಯ ಘಟನೆಯೊಂದು ಸಂಭವಿಸಿದೆ. ಖಾಸಗಿ ಶಾಲೆಯೊಂದರಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ವಿದ್ಯಾರ್ಥಿನಿಯು ಎಂದಿನಂತೆ ಶಾಲೆಗೆ ಹೊರಡಲು ಸಿದ್ಧತೆ ನಡೆಸುತ್ತಿದ್ದ ಸಂದರ್ಭದಲ್ಲೇ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಆದರೆ, ಬಾಲಕಿಯ ಈ ತೀವ್ರ ನಿರ್ಧಾರಕ್ಕೆ ನಿಖರವಾದ ಕಾರಣವೇನೆಂದು ಇನ್ನೂ ತಿಳಿದುಬಂದಿಲ್ಲ. ಮೃತ ಬಾಲಕಿಯು ತಂದೆ ರಾಘವ ಆಚಾರ್ಯ ಹಾಗೂ ತಾಯಿ ಕಲಾವತಿ ಅವರನ್ನು ಅಗಲಿದ್ದಾಳೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸಾವಿನ ಹಿಂದಿನ ಕಾರಣದ ಬಗ್ಗೆ ತನಿಖೆ ಕೈಗೊಂಡಿದ್ದಾರೆ.

Share This Article
Leave a Comment