ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ರಾಜ್ಯಾದ್ಯಂತ ನಡೆಸಿದ ದಾಳಿಯಲ್ಲಿ ಈವರೆಗೆ 34 ಅನಧಿಕೃತ ಸ್ಕ್ಯಾನಿಂಗ್ ಸೆಂಟರ್ ಗಳನ್ನು ಸೀಜ್ ಮಾಡಿದ್ದಾರೆ.
ಭ್ರೂಣ ಲಿಂಗ ಪತ್ತೆ ಮತ್ತು ಅಕ್ರಮ ಗರ್ಭಪಾತ ಪ್ರಕರಣ ಸಂಬಂಧ ಆಯಾ ಜಿಲ್ಲೆಯ ಪ್ರತಿಯೊಂದು ಸ್ಕ್ಯಾನಿಂಗ್ ಸೆಂಟರ್, ಆಸ್ಪತ್ರೆ, ಕ್ಲಿನಿಕ್ ಗಳಲ್ಲಿ ಪರಿಶೀಲನೆ ನಡೆಸಿ ವರದಿ ನೀಡುವಂತೆ ಆರೋಗ್ಯ ಇಲಾಖೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದೆ.
ಈಗಾಗಲೇ 5,083 ಸ್ಕ್ಯಾನಿಂಗ್ ಸೆಂಟರ್ ಗಳು ಹಾಗೂ ನರ್ಸಿಂಗ್ ಹೋಮ್ ಗಳಲ್ಲಿ ಪರಿಶೀಲನೆ ನಡೆಸಲಾಗಿದ್ದು, 34 ಸ್ಕ್ಯಾನಿಂಗ್ ಸೆಂಟರ್ ಗಳನ್ನು ಸೀಜ್ ಮಾಡಲಾಗಿದೆ. ವಿವಿಧ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ 429 ಕೇಂದ್ರಗಳಿಗೆ ನೋಟಿಸ್ ನೀಡಲಾಗಿದೆ.
ಇನ್ನು ಆರೋಗ್ಯ ಇಲಾಖೆ ನಡೆಸಿದ ದಾಳಿಯಲ್ಲಿ ಈವರೆಗೆ 156 ನಕಲಿ ವೈದ್ಯರು ಪತ್ತೆಯಾಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ನಕಲಿ ವೈದ್ಯರ ಸಂಖ್ಯೆ ಎಚ್ಚಾಗಿದ್ದು, ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.