Home ಕರಾವಳಿ ಪುತ್ತೂರು: ಪ್ರೀತಿಸಿದ ಯುವತಿಗೆ ಬೇರೊಬ್ಬನೊಂದಿಗೆ ವಿವಾಹ – ವರನ ಬೈಕ್ ಅನ್ನೇ ಸುಟ್ಟು ಹಾಕಿದ ಪಾಗಲ್...

ಪುತ್ತೂರು: ಪ್ರೀತಿಸಿದ ಯುವತಿಗೆ ಬೇರೊಬ್ಬನೊಂದಿಗೆ ವಿವಾಹ – ವರನ ಬೈಕ್ ಅನ್ನೇ ಸುಟ್ಟು ಹಾಕಿದ ಪಾಗಲ್ ಪ್ರೇಮಿ

0

ಪುತ್ತೂರು: ಪ್ರೀತಿಸಿದ ಯುವತಿ ಬೇರೊಬ್ಬನನ್ನು ವಿವಾಹವಾದ ಸಿಟ್ಟಿಗೆ ಪ್ರಿಯಕರ ವರನ ಬೈಕನ್ನೇ ಸುಟ್ಟು ಹಾಕಿರುವ ಘಟನೆ ಉಪ್ಪಿನಂಗಡಿ ಠಾಣೆ ವ್ಯಾಪ್ತಿಯ ನಿನ್ನಿಕಲ್ಲು ಪಾದಾಳ ಎಂಬಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಉಪ್ಪಿನಂಗಡಿ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಪೊಲೀಸರು ದ್ವಿಚಕ್ರ ವಾಹನಕ್ಕೆ ಬೆಂಕಿ ಹಚ್ಚಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸಿದಾಗ, ಈ ವಿಚಾರ ಬಯಲಾಗಿದೆ. ಸದ್ಯ ಪೊಲೀಸರು ಉಪ್ಪಿನಂಗಡಿ ಗ್ರಾಮದ ನಿನ್ನಿಕಲ್ಲು ಪಾದಾಳ ನಿವಾಸಿ ಸಂದೀಪ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ತಾನು ಪ್ರೀತಿಸಿರುವ ಯುವತಿ ಬೇರೊಬ್ಬನನ್ನು ವಿವಾಹವಾಗಿದ್ದಕ್ಕೆ ಪ್ರೇಯಸಿಯ ಪತಿಯ ಬೈಕ್ ಅನ್ನೇ ಸುಟ್ಟು ಹಾಕಿರೋದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ. ಆರೋಪಿ ಸಂದೀಪ್ ತನ್ನದೇ ಗ್ರಾಮದ ಯುವತಿಯನ್ನು ಏಕಮುಖವಾಗಿ ಪ್ರೀತಿಸುತ್ತಿದ್ದ. ಆಕೆಗೆ ಜನವರಿ 3ರಂದು ಬೇರೊಬ್ಬ ಯುವಕನೊಂದಿಗೆ ವಿವಾಹವಾಗಿದೆ‌. ಆಕೆಯನ್ನು ಮದುವೆಯಾದ ಯುವಕನ ಮೇಲೆ ಆರೋಪಿಗೆ ಸಿಟ್ಟಿತ್ತು. ಯುವತಿ ಜನವರಿ 6ರಂದು ಪತಿಯೊಂದಿಗೆ ತವರಿಗೆ ಬಂದಿದ್ದಳು. ರಾತ್ರಿ ವೇಳೆ ಮನೆಯ ಸಮೀಪ ಇರಿಸಿದ್ದ ಬೈಕಿಗೆ ಬೆಂಕಿ ಬಿದ್ದಿತ್ತು. ಬೈಕ್ ಹೊತ್ತಿ ಉರಿಯುತ್ತಿದ್ದುದನ್ನು ಅಲ್ಲಿದ್ದವರು ಗಮನಿಸಿ, ಬೈಕನ್ನು ಮನೆಯಿಂದ 100 ಮೀ ದೂರಕ್ಕೆ ಒಯ್ದು ಬೆಂಕಿ ಹಚ್ಚಲಾಗಿತ್ತು. ಈ ಬಗ್ಗೆ ವರ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದರು. ಈ ಬಗ್ಗೆ ಪೊಲೀಸರು ತನಿಖೆ ನಡೆಸಿದಾಗ ಆರೋಪಿ ಸಂದೀಪ್ ಈ ಕೃತ್ಯ ಎಸಗಿರುವುದು ಬಯಲಾಗಿದೆ‌. ತಾನು ಪ್ರೀತಿಸಿದ ಯುವತಿಯನ್ನು ಮದುವೆಯಾದ ಯುವಕನ ಮೇಲಿನ ದ್ವೇಷದಿಂದ ಆತನ ಬೈಕ್ ಅನ್ನು ಸುಟ್ಟುಹಾಕಿದ್ದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.


LEAVE A REPLY

Please enter your comment!
Please enter your name here