ವಿಟ್ಲ: ಕಳವು ಸೇರಿದಂತೆ ಹಲವು ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿ, ಕೆಲವು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ ಪೊಲೀಸರು ಮಂಗಳವಾರ(ಜೂ.16) ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಪುತ್ತೂರಿನ ಚಿಕ್ಕಮುಡ್ನೂರು ನಿವಾಸಿ, ಮೊಹಮ್ಮದ್ ಸಲಾಂ ಅಲಿಯಾಸ್ ಕೆ. ಎಂ. ಸಲಾಂ ಅಲಿಯಾಸ್ ಡಾಲರ್ ಸಲಾಂ ಬಂಧಿತ ಆರೋಪಿಯಾಗಿದ್ದಾನೆ. ಈತನ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ 2020ರ ಸಾಲಿನಲ್ಲಿ ಮನೆಗಳ್ಳತನ, ಕಳವು ಪ್ರಕರಣ ಮತ್ತು 2022ರ ಸಾಲಿನಲ್ಲಿ ಮತ್ತೊಂದು ಕಳವು ಪ್ರಕರಣ ದಾಖಲಾಗಿದ್ದವು. ಈ ಪ್ರಕರಣಗಳಲ್ಲಿ ಜಾಮೀನು ಪಡೆದು ಹೊರಬಂದಿದ್ದ ಈತ, ತದನಂತರ ಮಾನ್ಯ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದನು. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಖಚಿತ ಮಾಹಿತಿಯನ್ನು ಆಧಾರಿಸಿ, ದಾಳಿ ನಡೆಸಿದ ವಿಟ್ಲ ಉಪನಿರೀಕ್ಷಕರು ಹಾಗೂ ಸಿಬ್ಬಂದಿಗಳ ತಂಡ ಪುತ್ತೂರು ರೈಲ್ವೆ ನಿಲ್ದಾಣದ ಬಳಿ ಆರೋಪಿಯನ್ನು ಹೆಡೆಮುರಿ ಕಟ್ಟಿದ್ದಾರೆ. ಇನ್ನು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.



