ಸ್ಯಾಂಡಲ್​ವುಡ್ ನಟಿ ಕೃಷಿ ತಾಪಂಡ ಮನೆಯಲ್ಲಿ ಆಕೆಯ ಆಪ್ತ ಗೆಳೆಯ – ಉದ್ಯಮಿ ಆತ್ಮಹತ್ಯೆ..!

Prakhara News
1 Min Read

ಬೆಂಗಳೂರು: ಸ್ಯಾಂಡಲ್​ವುಡ್ ಖ್ಯಾತ ನಟಿ ಕೃಷಿ ತಾಪಂಡ ಅವರ ಮನೆಯಲ್ಲಿ ಉದ್ಯಮಿ ವೈಶಾಖ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿವಾಹಿತ ಉದ್ಯಮಿ ವೈಶಾಖ್ ಎನ್ನುವವರು ಕನ್ನಡದ ನಟಿ ಕೃಷಿ ತಾಪಂಡ ಅವರ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆರ್.ಆರ್. ನಗರದ ಪ್ರತಿಷ್ಠಿತ ‘ಎಲಿಗಂಟ್ಸ್ ಅಪಾರ್ಟ್‌ಮೆಂಟ್’ (Elegants Apartment) ನಲ್ಲಿ ಈ ದುರಂತ ಸಂಭವಿಸಿದೆ. ಲಭ್ಯವಿರುವ ಮಾಹಿತಿ ಪ್ರಕಾರ, ನಿನ್ನೆ ರಾತ್ರಿ ನಟಿ ಕ್ರಿಷಿ ತಾಪಂಡ ಫ್ಲಾಟ್‌ಗೆ ಬಂದಿದ್ದ ವೈಶಾಕ್, ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ನೋಡಿಕೊಂಡು ಫ್ಯಾನ್‌ಗೆ ನೇಣು ಬಿಗಿದುಕೊಂಡಿದ್ದಾರೆ ಎನ್ನಲಾಗಿದೆ. ಘಟನೆ ನಡೆದ ಸಂದರ್ಭದಲ್ಲಿ ನಟಿ ಕ್ರಿಷಿ ತಾಪಂಡ ಮನೆಯಲ್ಲಿ ಇರಲಿಲ್ಲ ಎಂದು ತಿಳಿದುಬಂದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ವೈಶಾಕ್‌ ಸಾವಿನ ವಿಷಯ ತಿಳಿಯುತ್ತಿದ್ದಂತೆ ಅಪಾರ್ಟ್‌ಮೆಂಟ್‌ಗೆ ಧಾವಿಸಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಅಗತ್ಯ ಸಾಕ್ಷ್ಯಗಳನ್ನು ಕಲೆಹಾಕಿದ್ದಾರೆ. ಸದ್ಯ ವೈಶಾಕ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಸಾವಿಗೆ ನಿಖರವಾದ ಕಾರಣವೇನು ಎಂಬುದು ಇನ್ನು ತಿಳಿದುಬಂದಿಲ್ಲವಾಗಿದ್ದು, ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ಈ ಹಿಂದೆ ಉದ್ಯಮಿ ಅರವಿಂದ್ ರೆಡ್ಡಿ ಅವರಿಗೆ ಬೆದರಿಕೆ ಹಾಕಿದ ಮತ್ತು ಬ್ಲ್ಯಾಕ್‌ಮೇಲ್ ಮಾಡಿದ ಪ್ರಕರಣದಲ್ಲಿ ಇದೇ ವೈಶಾಕ್ ಅವರನ್ನು ಪೊಲೀಸರು ಬಂಧಿಸಿದ್ದರು.

Share This Article
Leave a Comment