Home ಕರಾವಳಿ ಮಂಗಳೂರು: ಅಲ್ಪಸಂಖ್ಯಾತ ಮೋರ್ಚಾ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

ಮಂಗಳೂರು: ಅಲ್ಪಸಂಖ್ಯಾತ ಮೋರ್ಚಾ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

0

ಮಂಗಳೂರು ಮಂಡಲದ ಅಲ್ಪಸಂಖ್ಯಾತ ಮೋರ್ಚಾದ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮವು ಮುಡಿಪು ಕಂಬ್ಲಪದವಿನ ಪಕ್ಷದ ಕಚೇರಿಯಲ್ಲಿ ನಡೆಯಿತು.
ಈ ಸಭೆಯ ಅಧ್ಯಕ್ಷತೆಯನ್ನು ಮಂಡಲದ ಅಧ್ಯಕ್ಷರಾದ ಜಗದೀಶ್ ಆಳ್ವ ಕುವೈತ್ತಬೈಲ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.



ನೂತನವಾಗಿ ಮಂಡಲದ ಅಲ್ಪಸಂಖ್ಯಾತ ಮೋರ್ಚಾ ಆಯ್ಕೆಯಾದವರನ್ನು, ಮಾಜಿ ತಾಲೂಕ್ ಪಂಚಾಯತ್ ಸದಸ್ಯರಾದ ಸಿದ್ದೀಕ್ ತಲಪಾಡಿ ಹಾಗೂ ಕಾರ್ಯಕರ್ತರನ್ನು ಮಂಡಲದ ಅಧ್ಯಕ್ಷರು ಪಕ್ಷಕ್ಕೆ ಸೇರ್ಪಡೆ ಮಾಡಿದರು.
ಅಲ್ಪಸಂಖ್ಯಾತ ಮೋರ್ಚಾ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕರೀಂ ಉಚ್ಚಿಲ ರವರಿಗೆ ಪಕ್ಷದ ಧ್ವಜವನ್ನು ನೀಡಿದರು.

ಜಿಲ್ಲಾ ಕಾರ್ಯದರ್ಶಿ ಮಂಡಲದ ಪ್ರಭಾರಿಯಾದ ದಿನೇಶ್ ಅಮ್ಟೂರು ಸಂಘಟನಾತ್ಮಕ ವಿಷಯಗಳ ಕುರಿತು ಮಾಹಿತಿಯನ್ನು ನೀಡಿದರು.


ಜಿಲ್ಲಾ ಉಪಾಧ್ಯಕ್ಷರಾದ ರವೀಂದ್ರ ಶೆಟ್ಟಿ ಉಳಿದೊಟ್ಟು ಲೋಕಸಭಾ ಚುನಾವಣೆ ಬಗ್ಗೆ ಮಾತನಾಡಿದರು.
ವೇದಿಕೆಯಲ್ಲಿ ಮಂಡಲದ ಪ್ರಧಾನ ಕಾರ್ಯದರ್ಶಿ ದಯಾನಂದ ತೊಕ್ಕೋಟ್ಟು, ಸುಜೀತ್ ಮಾಡುರ್, ಮಂಡಲದ ಉಪಾಧ್ಯಕ್ಷರಾದ ಹೇಮಂತ್ ಶೆಟ್ಟಿ, ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಸಿರಾಜುದ್ದೀನ್, ಅಶ್ರಫ್ ಹರೇಕಳ, ಆಸ್ಗರ್ ಮುಡಿಪು, ಮಂಡಲದ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಅಶ್ರಫ್ ಮಾರಿಪಲ್ಲ, ಇರ್ಷಾದ್ ಡಿಜಿ ಕಟ್ಟೆ, ಮಂಡಲದ ಉಪಾಧ್ಯಕ್ಷರು ಹಾಗೂ ಕಾರ್ಯದರ್ಶಿ ಸದಸ್ಯರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here